ವ್ಯಕ್ತಿಗೆ ಕೋಪ ಬರುವುದು ಸಹಜ. ಆದ್ರೆ ಅದು ತಕ್ಷಣಕ್ಕೆ ಮಾತ್ರ ಇರಬೇಕು. ಮನುಷ್ಯ ಯಾವತ್ತೂ ದೀರ್ಘ ದ್ವೇಷಿ ಆಗಿರಬಾರದು. ಈ ಸಾಮರಸ್ಯ ಜೀವನದಲ್ಲಿ ಇದ್ದಾಗ ಬಾಂಧವ್ಯ ಸದಾ ಗಟ್ಟಿಯಾಗಿರುತ್ತದೆ ಎಂದು ಯಕ್ಷಗುರು ಸಂಜೀವ ಸುವರ್ಣ ಅಭಿಪ್ರಾಯಪಟ್ಟರು.
ಉಡುಪಿ ಬುಡ್ನಾರ್ ಯಕ್ಷ ಸಂಜೀವ ಯಕ್ಷಗಾನ ಕೇಂದ್ರದಲ್ಲಿ ಆಯೋಜಿಸಿದ “ಸಂಜೀವ-70 ಗುರು ಶಿಷ್ಯರ ಸಂವಾದ”ದಲ್ಲಿ ತಮ್ಮ ಯಕ್ಷಗಾನ ಜೀವನದ ಸಂಗತಿಗಳನ್ನು ಹಂಚಿಕೊಂಡರು.
ನನ್ನ ಹುಟ್ಟು ಹಾಗೂ ಬದುಕು ವಿಚಿತ್ರವೇ ಆಗಿದೆ. ಬೇರೆಯವರಿಂದ ಪಡೆದದ್ದೇ ಹೆಚ್ಚು ಸಮಾಜಕ್ಕೆ ನೀಡಿದ್ದು ಕಡಿಮೆ. ಸಮಾಜದಲ್ಲಿ ಕಂಡು ಕಲಿಯಬೇಕು ಹಾಗೂ ಸಮಾಜಕ್ಕೆ ಏನಾದರೂ ಕೊಡಬೇಕು ಎನ್ನುವುದು ನನ್ನ ಅನಿಸಿಕೆ. ಯಕ್ಷಗಾನ ಕೇಂದ್ರ ಹಾಗೂ ಗುರು ಶಿವರಾಮ ಕಾರಂತರಿಂದ ದೇಶದ ಕಲೆಗಳ ಪರಿಚಯವಾಯಿತು. ಆರ್ ಎಸ್ ಎಸ್ ಬಾಲ್ಯದಿಂದ ಕಲಿಸಿದ ಸಂಸ್ಕಾರ, ನೀತಿಪಾಠ ಹಲವು ರೀತಿಯಲ್ಲಿ ಅನುಕೂಲವಾಗಿದೆ ಎಂದರು.
ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ಯಕ್ಷಗಾನ ಕರಾವಳಿಯ ಗಂಡುಕಲೆ. ಇದೀಗ ದೇಶವ್ಯಾಪಿ ಹಬ್ಬಿದೆ. ಸನಾತನ ಸಂಸ್ಕೃತಿ, ಆಚಾರ, ವಿಚಾರ ಯಕ್ಷಗಾನದ ಮೂಲಕ ತಿಳಿಸಲಾಗುತ್ತಿದೆ. ಈ ಕ್ಷೇತ್ರದಲ್ಲಿ ಸಂಜೀವ ಸುವರ್ಣರ ಸಾಧನೆ ಶ್ಲಾಘನೀಯ ಎಂದರು. ವೈದ್ಯ ಡಾ. ಭಾಸ್ಕರಾನಂದ ಕುಮಾರ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ್ ಶೆಟ್ಟಿ, ಸಂಜೀವ ಸುವರ್ಣರ ಪತ್ನಿ ವೇದಾವತಿ ಸುವರ್ಣ ಉಪಸ್ಥಿತರಿದ್ದರು. ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಸ್ವಾಗತಿಸಿದರು. ಪಶುವೈದ್ಯ ಡಾ. ಪ್ರಶಾಂತ್ ಶೆಟ್ಟಿ ನಿರೂಪಿಸಿ, ವಂದಿಸಿದರು
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…