ಬೆಂಗಳೂರು: ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಖಾಸಗಿ ವಿಮಾನವೊಂದು ತುರ್ತು ಭೂ ಸ್ಪರ್ಶ ಮಾಡಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದ್ದು ಅದೃಷ್ಟವಶಾತ್ ಭಾರಿ ಅನಾಹುತವೊಂದು ತಪ್ಪಿದೆ.
ವಿಮಾನದ ಮುಂಭಾಗದ ವ್ಹೀಲ್ ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಹಾಲ್ ನಿಂದ ಟೇಕ್ ಆಫ್ ಆಗಿ ಬಿಯಾಲ್ ಗೆ ಹೊರಟಿದ್ದ ವ್ಟ್-ಕ್ಬ್ನ ಹೆಸರಿನ 1ಆ ವಿಮಾನ ತುರ್ತುಭೂಷ್ಪರ್ಷ ಮಾಡಿದ್ದು ಹಾಲ್ ನಲ್ಲೆ ಲ್ಯಾಂಡ್ ಮಾಡಲಾಗಿದೆ. ಈ ವೇಳೆ ವಿಮಾನ ಮಗುಚಿ ಬೀಳುವ ಹಂತಕ್ಕೆ ಹೋಗಿದ್ದು ವಿಮಾನದಲ್ಲಿ ಇಬ್ಬರು ಪೈಲೆಟ್ ಗಳಿದ್ದು ಸದ್ಯ ಪ್ರಾಣ ಹಾನಿ ಸಂಭವಿಸಿಲ್ಲ. . ತಾಂತ್ರಿಕ ದೋಷದಿಂದಾಗಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿದ್ದು ಸುರಕ್ಷಿತ ಭೂಸ್ಪರ್ಶಕ್ಕಾಗಿ ರನ್ವೆಯಲ್ಲಿ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಸುರಕ್ಷಿತವಾಗಿ ವಿಮಾನ ಭೂಸ್ಪರ್ಶ ಮಾಡಿದ್ದನ್ನು ಕಂಡು ಹೆಚ್ಎಎಲ್ ಸಿಬ್ಬಂದಿಗಳು ಚಪ್ಪಾಳೆ ತಟ್ಟಿ ಸಂಭ್ರಮಪಟ್ಟರು. ಸದ್ಯ ಯಾವುದೇ ಹಾನಿಯಾಗದೆ ಲ್ಯಾಂಡ್ ಆದ ಕಾರಣ ಎಲ್ಲರೂ ನಿಟ್ಟುಸಿರು ಬಿಟ್ಟಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…