ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಅಕ್ರಮ ಗಾಂಜಾ ಸಾಗಾಟ : ಇಬ್ಬರ ಬಂಧನ…!!

ಮಂಗಳೂರು: ಒರಿಸ್ಸಾದಿಂದ ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಿಸಿ ತಂದು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಒಡ್ಡಿಶಾದ ಬುಲುಬಿರೊ(24) ಮತ್ತು ಪಶ್ಚಿಮ ಬಂಗಾಳದ ದಿಲ್‌ದಾರ್ ಆಲಿ (28) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 8.650 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಕರ್ನಾಟಕ-ಕೇರಳ ಗಡಿ ಪ್ರದೇಶದ ತಲಪಾಡಿ ಸಮೀಪದ ದೇವಿಪುರ ರಸ್ತೆಯ ತಚ್ಚಾಣಿ ಪರಿಸರದಲ್ಲಿ ಅಕ್ರಮವಾಗಿ ಗಾಂಜಾ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ 2,60,000 ರೂ. ಮೌಲ್ಯದ ನಿಷೇಧಿತ ಮಾದಕ ವಸ್ತು ಗಾಂಜಾ, 2 ಮೊಬೈಲ್ ಫೋನುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 3 ಲಕ್ಷ ಆಗಬಹುದು. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಗಳು ಒರಿಸ್ಸಾದಿಂದ ಗಾಂಜಾವನ್ನು ಖರೀದಿಸಿಕೊಂಡು ಬೆಂಗಳೂರಿಗೆ ರೈಲಿನಲ್ಲಿ ತಂದು ಅಲ್ಲಿಂದ ಮಂಗಳೂರಿಗೆ ಬಸ್ಸಿನಲ್ಲಿ ಸಾಗಾಟ ಮಾಡಿಕೊಂಡು ಕರ್ನಾಟಕ, ಕೇರಳ ರಾಜ್ಯದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಆರೋಪಿಗಳು ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್‌ರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್.ಎಂ., ಎಸ್ಸೈ ಶರಣಪ್ಪಭಂಡಾರಿ ಮತ್ತಿತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!