ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು, ತಾರಿಪಡ್ಡು ಬಳಿ ನಡೆದಿದೆ.
ಉಮೇಶ್ ಆಳ್ವ ಅವರ ಕಿರಿಯ ಪುತ್ರ ತಾರಿಪಡ್ಡು ನಿವಾಸಿ ಶ್ರವಣ್ ಆಳ್ವ(25) ಆತ್ಮಹತ್ಯೆಗೆ ಶರಣಾದ ಯುವಕ. ಮಧ್ಯ ರಾತ್ರಿ ಶ್ರವಣ್ ಅವರ ಅಣ್ಣ ಕೆಲಸ ಮುಗಿಸಿ ಬಂದಾಗ ಆತ ಬೆಡ್ ರೂಮಿನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಶ್ರವಣ್ ಎಲೆಕ್ಟ್ರಿಷಿಯನ್ ವೃತ್ತಿ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ಸ್ನೇಹಿತರ ಜೊತೆಗಿದ್ದು, ರಾತ್ರಿ ಮನೆಗೆ ಬಂದಿದ್ದ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಶ್ರವಣ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…