ಬಂಟ್ವಾಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೊಂಡಾಲ ಇಲ್ಲಿ ಎಂ ಆರ್ ಪಿ ಎಲ್ ಸಂಸ್ಥೆಯ ಅನುದಾನದಿಂದ ನಿರ್ಮಾಣಗೊಳ್ಳಲಿರುವ ನೂತನ ಶಾಲಾ ಕೊಠಡಿಗೆ ಶಿಲನ್ಯಾಸ ಕಾರ್ಯಕ್ರಮ ನಡೆಯಿತು.
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಶಿಲಾನ್ಯಾಸ ನೆರವೇರಿಸಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಜನಾರ್ಧನ ಕುಲಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಳನೀರು ಅನಂತ ತಂತ್ರಿಗಳ ಪೌರೋಹಿತ್ಯದಲ್ಲಿ ಭೂಮಿ ಪೂಜೆ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ರೇಖಾ ಸಿ ಹೆಚ್ ಇವರನ್ನು ಶಾಲಾ ಶಿಕ್ಷಕರಿಂದ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಸದಸ್ಯರು ಸೇರಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ವಿಟ್ಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ,, ಬಂಟ್ವಾಳ ಪುರಸಭಾ ಸದಸ್ಯ ಗೋವಿಂದ ಪ್ರಭು, ದಿನೇಶ್ ಅಮ್ಮ್ಟೂರ್, ಜಯರಾಮ್ ಹೊಳ್ಳ, ಶ್ರೀಧರ್ ಶೆಟ್ಟಿ ಬೊಂಡಾಲ,ಕೊರಗಪ್ಪ ಬಂಗೇರ, ವಿವೇಕಾನಂದ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವಿನೋದ್ ಶೆಟ್ಟಿ,ಶಿವರಂಜಿನಿ ಕಲಾಕೇಂದ್ರ ಬೊಕ್ಕಸದ ಸಂಚಾಲಕಿ ಶಾರದಾಎಸ್ ರಾವ್, ಸಂಸ್ಕೃತ ಗುರುಗಳಾದ ದೇವರಾಜ್, ಮಂಗಳೂರು,ಶಿವಾನಂದ, ಬೊಂಡಾಲ, ಜನ ಸೇವಾ ಸಮಿತಿ ಬೊಂಡಾಲ ಇದರ ಸಂಚಾಲಕರು ಗಿರಿಧರ್ ಬಿ. ಪಿ. ಉಪಸ್ಥಿತರಿದ್ದರು
ಶಿಶುಮಂದಿರದ ಮಕ್ಕಳು ಪ್ರಾರ್ಥಿಸಿ,ಶಾಲಾ ಶಿಕ್ಷಕಿ ಲಾವಣ್ಯ ಸ್ವಾಗತಿಸಿ, ಪ್ರಭಾರ ಮುಖ್ಯ ಶಿಕ್ಷಕಿ ರೇಖಾ ಸಿ ಹೆಚ್ ವಂದಿಸಿ, ಶಿಕ್ಷಕಿ ಸೌಮ್ಯಾರವರು ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶಿಕ್ಷಕಿಯರಾದ ಭವ್ಯ ಹಾಗೂ ಕಿಶೋರಿ ಇವರು ಸಹಕರಿಸಿದರು
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…
ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ…