ಬಂಟ್ವಾಳ: ಎಲೆಕ್ಟ್ರೀಷಿಯನ್ ವೋರ್ವರಿಗೆ ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ.
ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್ (35) ಮೃತಪಟ್ಟ ದುರ್ದೈವಿಯಾಗಿದ್ದಾರೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿರುವ ಇವರು ಗುರುವಾರ ಸಂಜೆ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ಮನೆಯೊಂದರ ವಯರಿಂಗ್ ಕೆಲಸ ಮಾಡಿ ಮನೆಯ ಹೊರಗಡೆಯಲ್ಲುದ್ದ ಮೈನ್ ಸ್ವಿಚ್ ಬಳಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿದ ಪರಿಣಾಮ ಕೆಳಗೆ ಬಿದ್ದು ಗಾಯಗೊಂಡಿದ್ದರೆನ್ನಲಾಗಿದೆ.
ತಕ್ಷಣ ಸ್ಥಳದಲ್ಲಿದ್ದವರು ಗಾಯಾಳುವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿನ ವೈದ್ಯರು ಪರೀಕ್ಷಿಸಿದಾಗ ದೇವದಾಸ್ ರವರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ.
ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…