ದಕ್ಷಿಣ ಕನ್ನಡ : ಸರ್ಕಾರಿ ಪ್ರೌಢಶಾಲೆ ಪಡುಕೋಣಾಜೆ ಇಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗಾಗಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟವನ್ನು ಏರ್ಪಡಿಸಲಾಗಿತ್ತು.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡಬಿದ್ರೆ, ಸರ್ಕಾರಿ ಪ್ರೌಢಶಾಲೆ ಪಡುಕೋಣಾಜೆ, ಹಾಗೂ ಇತರರ ಸಹಕಾರದೊಂದಿಗೆ ಪಂದ್ಯಾಟವನ್ನು ಏರ್ಪಡಿಸಲಾಗಿದ್ದು, ಯಾವುದೇ ಅಡಚಣೆಗಳಿಲ್ಲದೆ, ಮಳೆರಾಯನ ಬಿಡುವಿನೊಂದಿಗೆ ಪಂದ್ಯಾಟ ಉತ್ತಮವಾಗಿ ಮೂಡಿ ಬಂತು. ಸಂಜೆ ವೇಳೆಗೆ ಪಂದ್ಯದ ಫಲಿತಾಂಶ ಪ್ರಕಟವಾಗಿದ್ದು, ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆ ಪುತ್ತಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದು, ಮಹಮ್ಮದೀಯ ಆಂಗ್ಲ ಮಾಧ್ಯಮ ಶಾಲೆ, ಕೋಟೆ ಬಾಗಿಲು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.

ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದಲ್ಲಿ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆ ಶಿರ್ಥಾಡಿ ಪ್ರಥಮ, ಬ್ಲೋಸಂ ಆಂಗ್ಲ ಮಾಧ್ಯಮ ಶಾಲೆ ಬೆಳುವಾಯಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆ ಪುತ್ತಿಗೆ ಪ್ರಥಮ ಹಾಗೂ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆ ಶಿರ್ಥಾಡಿ ದ್ವಿತೀಯ ಸ್ಥಾನವನ್ನು ಪಡೆದಿದ್ದು, ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಮೂಡುಕೋಣಜೆ ಪ್ರಥಮ ಸ್ಥಾನವನ್ನು ಪಡೆದಿದ್ದು ಮಹಮ್ಮದ್ ಯ ಆಂಗ್ಲ ಮಾಧ್ಯಮ ಶಾಲೆ, ಕೋಟೆ ಬಾಗಿಲು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ತೀರ್ಪುಗಾರರಾಗಿ ನವೀನ್ ಅಂಬೂರಿ ಆಗಮಿಸಿದ್ದರು. ಸಂಜೆ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ಸ್ಥಳೀಯ ಪಂಚಾಯಿತ್ ಸದಸ್ಯ ಸಂತೋಷ್ ಶೆಟ್ಟಿ, ಸ್ಥಳೀಯ ಪಂಚಾಯಿತಿ ಸದಸ್ಯೆ ಲತಾ ಹೆಗ್ಡೆ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ ಸಹಿತ ಹಲವರು ಪಾಲ್ಗೊಂಡಿದ್ದು, ಸಭಾ ಕಾರ್ಯಕ್ರಮದ ನಿರೂಪಣೆಯನ್ನು ಕನ್ನಡ ಭಾಷಾ ಶಿಕ್ಷಕಿ ಅನ್ನಪೂರ್ಣೇಶ್ವರಿ ನೆರವೇರಿಸಿದ್ದು, ವಂದನಾರ್ಪಣೆಯನ್ನು ದೈಹಿಕ ಶಿಕ್ಷಣ ಶಿಕ್ಷಕರು ಜಯಶ್ರೀ ನೆರವೇರಿಸಿದರು.



