ಹನಗೋಡು ಗ್ರಾಮ ಪಂಚಾಯಿತಿ ಪಿಡಿಒ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ, ಅವರನ್ನು ಬೇರೇಡೆಗೆ ವರ್ಗಾಹಿಸುವಂತೆ ಆಗ್ರಹಿಸಿ ಗ್ರಾಪಂ ಗ್ರಾಪಂ ಅಧ್ಯಕ್ಷ ಹಾಗೂ ಸದಸ್ಯರು ಸಾರ್ವಜನಿಕರೊಂದಿಗೆ ಪ್ರತಿಭಟನೆ ನಡೆಸಿದರು.
ಪಂಚಾಯಿತಿ ಅಧ್ಯಕ್ಷ ಚನ್ನಯ್ಯ ಮಾತನಾಡಿ, ಪಿಡಿಒ ಅನಿತಾ ಅವರು ಇಲ್ಲಿಗೆ ಬಂದು ವರ್ಷವಾದರೂ ಪಂಚಾಯಿತಿಯ ಅಭಿವೃದ್ಧಿ ಕಾರ್ಯಗಳ ಕಡೆ ಗಮನ ಹರಿಸಿಲ್ಲ, ಸಾರ್ವಜನಿಕರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸುತ್ತಿಲ್ಲ, ಅಧ್ಯಕ್ಷರು, ಸದಸ್ಯರಿಗೆ ಅಗೌರವದಿಂದ ನಡೆದುಕೊಂಡು ಉಡಾಫೆ ಮಾತುಗಳನ್ನಾಡುತ್ತಾರೆ. ಇಂತಹ ಅಧಿಕಾರಿ ಯಿಂದ ಗ್ರಾಪಂನಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾ ಗುತ್ತಿಲ್ಲ, ಸಾರ್ವಜನಿಕರು ದಿನನಿತ್ಯ ಕಚೇರಿಗೆ ಬಂದು ತಮ್ಮ ಕೆಲಸವಾಗದೆ ಹಿಡಿಶಾಪ ಹಾಕಿ ಹೋಗುತ್ತಿದ್ದಾರೆ ಎಂದು ಆರೋಪಿಸಿದರು.
ಹನಗೋಡು ಗ್ರಾಪಂ ಪಿಡಿಒ ವಿರುದ್ಧ ಸದಸ್ಯರು ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಇಒ ಹೊಂಗಯ್ಯ ಭೇಟಿ ನೀಡಿ ಅಹವಾಲು ಸ್ವೀಕರಿಸಿದರು. ನಂತರ ಹೊಂಗಯ್ಯ ಗ್ರಾಪಂಗೆ ಭೇಟಿ ನೀಡಿ ಪ್ರತಿಭಟನಾನಿರತ ಆಡಳಿತ ಮಂಡಳಿಯವರ ಮನವೊಲಿಸಿ ಕಚೇರಿಯ ಬೀಗ ತೆರವುಗೊಳಿಸಿ ಆಡಳಿತ ಮಂಡಳಿಯವರೊಂದಿಗೆ ಪ್ರತ್ಯೇಶ್ ಸಭೆ ನಡೆಸಿದರು. ಅಧ್ಯಕ್ಷರು ಸೇರಿದಂತೆ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಪಿಡಿಒಗೆ ಇಒ ಸೂಚನೆ ನೀಡಿದರು. ಇದಲ್ಲದೆ ಅಧ್ಯಕ್ಷರು ಹಾಗೂ ಸದಸ್ಯರು ನೀಡಿರುವ ಮನವಿಯನ್ನು ಕೂಡಲೇ ಜಿಪಂ ಸಿಇಒ ಗೆ ತಲುಪಿಸಲಾಗುವುದು. ಅಲ್ಲಿಯವರೆವಿಗೂ ಕಾಲಾವಕಾಶ ನೀಡಿ ಗ್ರಾ.ಪಂ.ನ ಕೆಲಸ ಕಾರ್ಯ ನಡೆಸಲು ಅವಕಾಶ ಮಾಡಿಕೊಡಿ, ನಾನು ಕೂಡ ಹನಗೋಡು ಗ್ರಾ.ಪಂ.ಗೆ ಹೆಚ್ಚಿನ ಒತ್ತು ನೀಡುತ್ತೇನೆ ಎಂದು ಇಒ ಭರವಸೆ ನೀಡಿದರು. ನಂತರ ಪ್ರತಿಭಟನೆಯನ್ನು ಹಿಂಪಡೆದರು.
ವೇಳೆ ತಾಲೂಕು ಪಿಡಿಒ ಸಂಘದ ಅಧ್ಯಕ್ಷ ರಾಮಣ್ಣ ಇದ್ದರು. ಗ್ರಾಪಂ ಉಪಾಧ್ಯಕ್ಷೆ ಜಯಲಕ್ಷ್ಮೀ, ಸದಸ್ಯರಾದ ಶಿವಣ್ಣ, ಸಂತೋಷ್, ರತ್ನಶ್ರೀಧರ್, ಛಾಯಾನಾಗೇಗೌಡ, ಸಂಗೀತಾ ಸುರೇಶ್, ಪವಿತ್ರಾ, ಬೋರೇಗೌಡ, ಈಶ್ವರ್, ಮಾದೇವ ನಾಯ್ಕ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು. ಗ್ರಾಮಾಂತರ ಪೋಲಿಸರು ಬಂದೋಬಸ್ತುವಹಿಸಿದ್ದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…