ಕ್ರೈಮ್

ಐದು ವರ್ಷಗಳ ಹಿಂದೆ ಮಹಿಳೆಯ ಹತ್ಯೆಗೈದು 29 ತುಂಡುಗಳಾಗಿ ಎಸೆದ ಪ್ರಕರಣ; ಮೂವರು ಆರೋಪಿಗಳು ದೋಷಿಗಳೆಂದು ಕೋರ್ಟ್ ತೀರ್ಪು

ನಗರದ ಅತ್ತಾವರದಲ್ಲಿ ಶ್ರೀ ಪೊಳಲಿ ಎಲೆಕ್ಟ್ರಾನಿಕ್ಸ್‌ ಅಂಗಡಿ ಇಟ್ಟುಕೊಂಡು, ಕುರಿಚಿಟ್‌ ಫಂಡ್‌ ವ್ಯವಹಾರ ನಡೆಸುತ್ತಿದ್ದ ಶ್ರೀಮತಿ ಶೆಟ್ಟಿ (37) ಅವರ ಕೊಲೆ ಪ್ರಕರಣದಲ್ಲಿ ಮೂವರನ್ನು ದೋಷಿಗಳೆಂದು ಇಲ್ಲಿಯ ನ್ಯಾಯಾಲಯ ಘೋಷಿಸಿದೆ.

ಸೆಮಿನರಿ ಕಂಪೌಂಡ್‌, ಅತ್ತಾವರ ನ್ಯೂರೋಡ್‌ ಕಂಕನಾಡಿಯ ಮೂಲ ನಿವಾಸಿಯಾಗಿರುವ ಜೋನಸ್‌ ಸ್ಯಾಮ್ಸನ್‌ ಅಲಿಯಾಸ್‌ ಜೋನಸ್‌ ಜೌಲಿನ್‌ ಸ್ಯಾಮ್ಸನ್‌, ಅವರ ಪತ್ನಿ ವೆಲೆನ್ಸಿಯಾದ ವಿಕ್ಟೋರಿಯಾ ಮಥಾಯಿಸ್‌ ಹಾಗೂ ಕುಂಜತ್‌ಬೈಲ್‌ ಮರಕಡ ಗ್ರಾಮ ತಾರಿಪಾಡಿ ಗುಡ್ಡೆಯ ರಾಜು ಘೋಷಿತ ಆರೋಪಿಗಳು. ಇವರಿಗೆ ಶಿಕ್ಷೆ ಪ್ರಮಾಣವನ್ನು ಇದೇ 17ರಂದು ಪ್ರಕಟಿಸಲಿದೆ.

ಜೋನಸ್‌ ಸ್ಯಾಮ್ಸನ್‌ ಕುರಿಚಿಟ್‌ ಫಂಡ್‌ನಲ್ಲಿ ಎರಡು ಸದಸ್ಯತ್ವ ಹೊಂದಿದ್ದ. ಅವಧಿಗೆ ಮೊದಲೇ ಎರಡೂ ಸದಸ್ಯತ್ವದ ಹಣವನ್ನು ಪಡೆದುಕೊಂಡಿದ್ದ. ಮಾಸಿಕ ಕಂತು ಪಾವತಿಸಲು ವಿಫಲನಾಗಿದ್ದ. ಕಂತು ಪಾವತಿಸುವಂತೆ ಶ್ರೀಮತಿ ಶೆಟ್ಟಿ ಒತ್ತಾಯಿಸಿದ್ದರು. 11.5.2019ರಂದು ಬೆಳಿಗ್ಗೆ ತಮ್ಮ ದ್ವಿಚಕ್ರವಾಹನದಲ್ಲಿ ಶ್ರೀಮತಿ ಶೆಟ್ಟಿ ಅವರು ಹಣ ಕೇಳಲು ಜೋನಸ್‌ ಸ್ಯಾಮ್ಸನ್‌ನ ಮನೆಗೆ ಹೋಗಿದ್ದರು. ಹಣ ಕೊಡದಿದ್ದುದಕ್ಕೆ ಶ್ರೀಮತಿ ಶೆಟ್ಟಿ ಅವರು ಬೈದಾಗ, ಜೋನಸ್‌ ಸ್ಯಾಮ್ಸನ್‌ ಕೋಪಗೊಂಡು ಮರದ ಪಟ್ಟಿಯ ತುಂಡಿನಿಂದ ಶ್ರೀಮತಿಅವರ ಹಣೆಗೆ ಹೊಡೆದಿದ್ದ. ಶ್ರೀಮತಿ ಅವರು ಅಲ್ಲಿಯೇ ನೆಲಕ್ಕೆ ಬಿದ್ದಿದ್ದರು. ಮುಖ, ಗಲ್ಲಕ್ಕೆ ಗುದ್ದಿದ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ತನ್ನ ಪತ್ನಿ ವಿಕ್ಟೋರಿಯಾ ಮಥಾಯಿಸ್‌ಳೊಂದಿಗೆ ಮನೆ ಒಳಗೆ ಒಯ್ದು, ಮೈಮೇಲಿದ್ದ ಆಭರಣ ದೋಚಿ ನಂತರ ಕೊಲೆ ಮಾಡಿ ದೇಹವನ್ನು ತುಂಡು ತುಂಡು ಮಾಡಿ ನಗರದ ವಿವಿಧೆಡೆ ಎಸೆದಿದ್ದರು.

ಶ್ರೀಮತಿ ಅವರ ಮೈಮೇಲಿದ್ದ ಆಭರಣಗಳನ್ನು ಮರು ದಿನ ಗಂಡ– ಹೆಂಡತಿ ಇಬ್ಬರೂ 3ನೇ ಆರೋಪಿ ರಾಜುಗೆ ನೀಡಿದ್ದರು. ಕೊಲೆ ಮಾಡಿದ ವಿಷಯವನ್ನು ರಾಜುಗೆ ತಿಳಿಸಿದ್ದರೂ ರಾಜು, ಚಿನ್ನಾಭರಣ ಪಡೆದುಕೊಂಡು ಬಚ್ಚಿಟ್ಟಿದ್ದಲ್ಲದೇ ಅವರಿಗೆ ಆಶ್ರಯ ನೀಡಿದ್ದ.

ಮಂಗಳೂರು ಪೂರ್ವ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ಮಹೇಶ್‌ ಎಂ. ಅವರು ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವೆನ್ಲಾಕ್‌ ಆಸ್ಪತ್ರೆಯ ಫೊರೆನ್ಸಿಕ್‌ ವಿಭಾಗದ ವೈದ್ಯಾಧಿಕಾರಿ ಡಾ. ಜಗದೀಶ್‌ ರಾವ್‌ ಶವಪರೀಕ್ಷೆ ನಡೆಸಿ ವರದಿ ನೀಡಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಇಲ್ಲಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್‌.ಎಸ್‌. ಅವರು, ಈ ಮೂವರು ದೋಷಿತರು ಎಂದು ತೀರ್ಪು ನೀಡಿದ್ದಾರೆ. ಶಿಕ್ಷೆಯ ಪ್ರಮಾಣದ ಮೇಲೆ ವಿಚಾರಣೆಯನ್ನು ಇದೇ 17ಕ್ಕೆ ನಿಗದಿ ಪಡಿಸಲಾಗಿದೆ.

ಸರ್ಕಾರದ ಪರವಾಗಿ ಸರ್ಕಾರಿ ವಕೀಲರಾದ ಜುಡಿತ್‌ ಓಲ್ಗಾ ಮಾರ್ಗರೇಟ್‌ ಕ್ರಾಸ್ತಾ ಅವರು ವಾದ ಮಂಡಿಸಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…

7 hours ago

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…

7 hours ago

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…

7 hours ago

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…

7 hours ago

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…

7 hours ago

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…

7 hours ago