ಉಡುಪಿ: ಪ್ರಜಾಪ್ರಭುತ್ವದ ಮೌಲ್ಯ ಸಾರಿದ ಬೃಹತ್ ಮಾನವ ಸರಪಳಿ; ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗಿ
ಶಿರೂರಿನಿಂದ ಹೆಜಮಾಡಿಯವರೆಗೆ ಮೊಳಗಿದ ಜೈ ಹಿಂದ್, ಜೈ ಕರ್ನಾಟಕ ಘೋಷಣೆ
ಉಡುಪಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನರಿಗೆ ತಲುಪಿಸುವ ಮಹತ್ವದ ಉದ್ದೇಶದೊಂದಿಗೆ ಉಡುಪಿ ಜಿಲ್ಲೆಯ ಗಡಿಭಾಗಗಳಾದ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ನಿಂದ ಕಾಪು ತಾಲೂಕಿನ ಹೆಜಮಾಡಿ ಸೇತುವೆ ವರೆಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸುಮಾರು 107 ಕಿ. ಮೀ ಉದ್ದದ ಮಾನವ ಸರಪಳಿ ರಚನೆ ಕಾರ್ಯಕ್ರಮ ನಡೆಯಿತು.
ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪರಸ್ಪರ ಕೈಯನ್ನು ಹಿಡಿದುಕೊಂಡು ಮಾನವ ಸರಪಳಿ ರಚಿಸಿದರು. ಉಡುಪಿ ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ ಆಯೋಜಿಸಿದ ಜಿಲ್ಲಾಮಟ್ಟದ ಕಾರ್ಯಕ್ರಮವನ್ನು ಚಂಡೆ ಬಾರಿಸುವ ಮೂಲಕ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಸಂವಿಧಾನದ ಮೌಲ್ಯಗಳನ್ನು ಎಲ್ಲೆಡೆ ಪಸರಿಸುವ ಉದ್ದೇಶದಿಂದ ವಿನೂತನವಾದ ಮಾನವ ಸರಪಳಿ ಕಾರ್ಯಕ್ರಮವನ್ನು ರಾಜ್ಯ ಸರ್ಕಾರವು ಆಯೋಜಿಸಿದ್ದು, ಪ್ರಜಾಪ್ರಭುತ್ವವು ಇನ್ನಷ್ಟು ಗಟ್ಟಿಗೊಂಡು ಪ್ರತಿಯೊಬ್ಬರ ಬದುಕಿನ ಭಧ್ರ ಬುನಾದಿಯಾಗಲಿ ಎಂದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್ ಗಂಗಣ್ಣವರ್ ಮಾತನಾಡಿ, ನಮ್ಮ ಜವಾಬ್ದಾರಿಗಳ ಅರ್ಥೈಸಿಕೊಂಡಾಗ ಮಾತ್ರ ನಮ್ಮ ಹಕ್ಕುಗಳಿಗೆ ಅರ್ಥ ಬರುತ್ತದೆ. ನಾಗರಿಕನ ಜವಾಬ್ದಾರಿಯುತ ನಡವಳಿಕೆಯಿಂದ ದೇಶದ ಶಾಂತಿ ಸುವ್ಯವಸ್ಥೆ ಚೆನ್ನಾಗಿರುತ್ತದೆ. ಸಂವಿಧಾನದ ಆಶಯಗಳನ್ನು ನಮ್ಮ ನಡವಳಿಕೆಯಲ್ಲಿ ತೋರಿಸಬೇಕು. ಸಂವಿಧಾನದ ವಿಚಾರಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಸ್ವಾತಂತ್ರ‍್ಯ ತಂದುಕೊಟ್ಟ ಮಹಾತ್ಮರ ಬಲಿದಾನಗಳಿಗೆ ಅರ್ಥ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ರಚಿಸಿದ “ಪ್ರಜಾಪ್ರಭುತ್ವ ಆಶಯದ ಕಿರು ಹೊತ್ತಿಗೆಯನ್ನು” ಬಿಡುಗಡೆಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಚಂಡೆ ಹಾಗೂ ಕಂಗೀಲು, ಯಕ್ಷಗಾನ ಕಲಾವಿದರು ಹಾಗೂ ವಿವಿಧ ಕಲಾ ತಂಡಗಳು ಭಾಗವಹಿಸಿದವು.
500 ಮೀ ಉದ್ದದ ರಾಷ್ಟ್ರಧ್ವಜ ಹಾಗೂ ಕರ್ನಾಟಕ ರಾಜ್ಯದ ನಾಡ ಧ್ವಜವನ್ನು ಕೈಯಲ್ಲಿ ಹಿಡಿದು ಪ್ರದರ್ಶಿಸಲಾಯಿತು. ಮಾನವ ಸರಪಳಿ ಕಾರ್ಯಕ್ರಮದಲ್ಲಿ ಎರಡು ಕೈಯಗಳನ್ನು ಮೇಲೆತ್ತಿ ಜೈ ಹಿಂದ್ ಜೈ ಕರ್ನಾಟಕ ಘೋಷಣೆ ಕೂಗುವುದರೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳಿಸಲಾಯಿತು. ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಿಡಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಡಿ.ಎಫ್.ಒ ಗಣಪತಿ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ. ಜಿ.ಎಸ್ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ನಗರಸಭೆಯ ಅಧ್ಯಕ್ಷ ಪ್ರಭಾಕರ್ ಪೂಜಾರಿ, ರೋಟರಿಯ ಗರ್ವನರ್ ದೇವಾನಂದ್, ಸಹಕಾರಿ ಸಂಘದ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ, ಸ್ವಾತಂತ್ರ್ಯ ಹೋರಾಟಗಾರ ಮಲ್ಪೆ ರಾಘವೇಂದ್ರ, ರೋಟರಿಯ ಕ್ಲಬ್‌ನ ಸದಸ್ಯರು, ಸಂಘ-ಸಂಸ್ಥೆಯ ಪದಾಧಿಕಾರಿಗಳು, ಯುವಕ-ಯುವತಿ ಮಂಡಳಿಗಳು, ಸ್ವ-ಸಹಾಯ ಸಂಘದ ಸದಸ್ಯರುಗಳು, ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…