ಜನ ಮನದ ನಾಡಿ ಮಿಡಿತ

Advertisement

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ; ಫರಂಗಿಪೇಟೆಯಿಂದ ಮಿತ್ತೂರು, ಕಬಕದ ವರೆಗೆ ಮಾನವ ಸರಪಳಿ

ರಾಜ್ಯ ಸರ್ಕಾರದ ನಿರ್ದೇಶನದನ್ವಯ ಬಂಟ್ವಾಳ ತಾಲೂಕಿನಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಭಾನುವಾರ ಫರಂಗಿಪೇಟೆಯಿಂದ ಮಿತ್ತೂರು, ಕಬಕದ ವರೆಗೆ ಮಾನವ ಸರಪಳಿಯನ್ನು ರೂಪಿಸಲಾಯಿತು.
ಆರಂಭದಲ್ಲಿ ನಾಡಗೀತೆ ಹಾಡಿ, ಬಳಿಕ ಪ್ರಮುಖರಿಂದ ಸಂದೇಶ ನೀಡಿದ ಬಳಿಕ ಸಂವಿಧಾನದ ಪ್ರಸ್ತಾವನೆಯನ್ನು ಓದಲಾಯಿತು. ಬಳಿಕ ಎಲ್ಲರೂ ಪರಸ್ಪರ ಕೈಕೈ ಹಿಡಿದುಕೊಂಡು ಸರಪಳಿಯನ್ನು ನಿರ್ಮಿಸಿದರು.

 


ಬಿ.ಸಿ.ರೋಡ್ ಫ್ಲೈಓವರ್ ಕೆಳಗೆ ನಡೆದ ಕಾರ್ಯಕ್ರಮದಲ್ಲಿ ಬಂಟ್ವಾಳ ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಲೊರೆಟ್ಟೊ ಸಂದೇಶ ನೀಡಿ, ಪ್ರಜಾಪ್ರಭುತ್ವ ರಕ್ಷಣೆ ಹಾಗೂ ಅದರ ಅರಿವು ಪಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಈ ಸಂದರ್ಭ ಬುಡಾ ಅಧ್ಯಕ್ಷ ಬೇಬಿ ಕುಂದರ್ ಅವರು ಹಾಗೂ ಸಾರ್ವಜನಿಕರ ಪರವಾಗಿ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿದರು. ಬಂಟ್ವಾಳ ತಹಸೀಲ್ದಾರ್ ಡಿ. ಅರ್ಚನಾ ಭಟ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ಸಮಾಜ ಕಲ್ಯಾಣ ಇಲಾಖಾಧಿಕಾರಿ ಜಯಶ್ರೀ ಸಹಿತ ನಾನಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಸಂದರ್ಭ ಸ್ಥಳೀಯ ಸ್ವಯಂಸೇವಾ ಸಂಘಟನೆಗಳು, ನಾನಾ ಸಂಘಟನೆಗಳ ಪ್ರಮುಖರು, ಸರಕಾರಿ ನೌಕರರ ಸಂಘ, ಸಾರ್ವಜನಿಕ ಸಂಘಟನೆಗಳು, ಸಾರ್ವಜನಿಕ ಸೇವಾ ಚಟುವಟಿಕೆಗಳಲ್ಲಿ ನಿರತರ ಸಹಿತ ಹಲವು ಮಂದಿ ಉಪಸ್ಥಿತರಿದ್ದು, ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭ ಬ್ಯಾನರ್, ಫಲಕಗಳನ್ನು ಪ್ರದರ್ಶಿಸಲಾಯಿತು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!