ಜನ ಮನದ ನಾಡಿ ಮಿಡಿತ

Advertisement

ಭಜರಂಗದಳ-ವಿ.ಎಚ್.ಪಿ ಯಿಂದ ಬಿ‌.ಸಿ.ರೋಡ್ ಚಲೋ ಕರೆ ಹಿನ್ನಲೆ; ಪೋಲೀಸರ ತಡೆಯನ್ನು ಲೆಕ್ಕಿಸದೆ ಮುಂದೆ ಸಾಗಿದ ಕಾರ್ಯಕರ್ತರು https://abhimatha.tv/news/16652/

ಮಂಗಳೂರು: ಭಜರಂಗದಳ-ವಿ.ಎಚ್.ಪಿ ಯಿಂದ ಬಿ‌.ಸಿ.ರೋಡ್ ಚಲೋ ಕರೆ ಹಿನ್ನಲೆಯಲ್ಲಿ ಬಿಸಿರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗಕ್ಕೆ ಕಾರ್ಯಕರ್ತರ ಜೈಕಾರ ಘೋಷಣೆಯ ನಡುವೆ ಬಂದಿಳಿದ ಹಿಂದೂ ನಾಯಕ, ವಿಶ್ವಹಿಂದೂ ಪರಿಷತ್ ಪ್ರಾಂತ ಸಹಕಾರ್ಯವಾಹ ಶರಣ್ ಪಂಪ್ ವೆಲ್,  ಜೈ ಕಾರ ಘೋಷಣೆ ಕೂಗಿದ ಕಾರ್ಯಕರ್ತರು ಪೋಲೀಸರ ತಡೆಯನ್ನು ಲೆಕ್ಕಿಸದೆ ಮುಂದೆ ಸಾಗಿದರು. ಈ ವೇಳೆ ಪೋಲೀಸ ರು ಹಾಗೂ ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟ ನಡೆಯಿತು. ಪರಿಸ್ಥಿತಿ ಕೈ ಮೀರಿಹೋಗುವ ಹಂತಕ್ಕೆ ತಲುಪಿದಾಗ ಪೋಲೀಸರು ಬಸ್ ಗಳನ್ನು ರಸ್ತೆಗೆ ಅಡ್ಡಲಾಗಿ ಇಟ್ಟು ಕಾರ್ಯಕರ್ತರಿಗೆ ತಡೆಯೊಡ್ಡಿದರು.

ಬಳಿಕ ಹೆದ್ದಾರಿಯಲ್ಲಿ ಕೆಲಹೊತ್ತು ಕಾರ್ಯಕರ್ತರು ಘೋಷಣೆ ಕೂಗಿದರು. ಶರಣ್ ಪಂಪ್ ವೆಲ್ಅವರಿಗೆ ಸವಾಲು ಹಾಕಿರುವ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಅವರ ವಿರುದ್ದ ಘೋಷಣೆ ಕೂಗಿದರು.
ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿಮಾತನಾಡಿ, ಬಿಸಿರೋಡಿನ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಅವರ ಸವಾಲು ಸ್ವೀಕರಿಸಿ ಬಿಸಿರೋಡಿಗೆ ಬಂದಿದ್ದೇನೆ. ಇನ್ನೂ ಮುಂದೆಯೂ ಇಂತಹ ಸವಾಲು ಸ್ವೀಕರಿಸಲು ತಯಾರಾಗಿದ್ದೇವೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ ಜನ ಸೇರುವ ಮೂಲಕ ಹಿಂದುತ್ವಕ್ಕೆ ಜಯಸಿಕ್ಕಿದೆ. ಇಂತಹ ಸವಾಲುಗಳು ಹಿಂದೂ ಕಾರ್ಯಕರ್ತರಿಗೆ ಇದೇ ಮೊದಲಲ್ಲ,ಸಾಕಷ್ಟು ಕಾರ್ಯಕರ್ತರು ಪ್ರಾಣವನ್ನು ಕೊಟ್ಟಿದ್ದಾರೆ,ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.ಜೊತೆಗೆ ಜೈಲಿಗೂ ಹೋಗಿದ್ದಾರೆ.ನಾಗಮಂಗಲದ ಗಣೇಶ ಚತುರ್ಥಿಯ ಮೆರವಣಿಗೆ ಸಂದರ್ಭದಲ್ಲಿ ಕಿಡಿಗೇಡಿಗಳು ಹಿಂಸೆ ಎಬ್ಬಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಹೇಳಿಕೆಯನ್ನು ಕೊಟ್ಟಿದ್ದೇವೆ.ಆದರೆ ಆತ ಅದಕ್ಕೆ ಬಿಸಿರೋಡಿಗೆ ಆಗಮಿಸುವಂತೆ ಸವಾಲು ಹಾಕಿದ್ದ. ಆತನ ಸವಾಲಿಗೆ ಉತ್ತರವಾಗಿ ನಾವು ಇಂದು ಬಿಸಿರೋಡಿನಲ್ಲಿ ಸೇರಿದ್ದೇವೆ. ಮುಂದೆ ಅವಶ್ಯಕತೆ ಬಿದ್ದರೆ ಆತ ಹೇಳಿದಂತೆ ಮಸೀದಿಗೆ ಹೋಗುವುದಕ್ಕೂ ಸಿದ್ದರಿದ್ದೇವೆ. ಇದು ಶರಣ್ ಒಬ್ಬನಿ್ಗೆ ಹಾಕಿದ ಸಾವಲು ಅಲ್ಲ‌ ಇಡೀ ಹಿಂದೂ ಕಾರ್ಯಕರ್ತರಿಗೆ ಹಾಕಿದ ಸವಾಲು ಎಂದು ಅವರು ತಿಳಿಸಿದರು.ಯಾರಿಗೂ ಆಹ್ವಾನ ನೀಡದೆ ತಾವೆಲ್ಲರೂ ಆಗಮಿಸಿದ್ದಕ್ಕೆ ಧನ್ಯವಾದ ಸಮರ್ಪಿಸುತ್ತಿದ್ದೇನೆ ಎಂದು ಹೇಳಿದರು.
ಸವಾಲಿಗೆ ಪ್ರತಿ ಸವಾಲು ಹಾಕಿದ್ದ ಹಿಂದೂ ಸಂಘಟನೆಯ ಪ್ರಮುಖ ಪುನೀತ್ ಅತ್ತಾವರ ಕೂಡ ಬಿಸಿರೋಡಿನ ಚಲೋ ಕಾರ್ಯಕ್ರಮದಲ್ಲಿ ಶರಣ್ ಪಂಪ್ ವೆಲ್ ಜೊತೆ ಆಗಮಿಸಿದ್ದರು.
ಐಜಿಪಿ ಅಮಿತ್ ಸಿಂಗ್,ಎಸ್.ಪಿ.ಯತೀಶ್ ಎನ್ .ಎ.ಸಿ.ಹರ್ಷವರ್ದನ್, ತಹಶಿಲ್ದಾರ್ ಅರ್ಚನಾ ಭಟ್ ಅವರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು ಬಿ.ಸಿ.ರೋಡ್ ನಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು‌

ಹೆಚ್ಚುವರಿ ಪೊಲೀಸರ ನಿಯೋಜನೆ  

ಹಿಂದೂ ಸಂಘಟನೆಯ ಪ್ರಮುಖರಾದ ಪ್ರಸಾದ್ ಕುಮಾರ್ ರೈ ಬಂಟ್ವಾಳ, ಭಾಸ್ಕರ್ ಧರ್ಮಸ್ಥಳ, ನವೀನ್ ನೆರಿಯಾ,ಭುಜಂಗ ಕುಲಾಲ್, ಗುರುರಾಜ್ ಬಂಟ್ವಾಳ, ನರಸಿಂಹ ಮಹೇಶ್ ಬೈಲೂರು, ಕೃಷ್ಣಪ್ರಸಾದ್, ಮಿಥುನ್ ಕಲ್ಲಡ್ಕ, ನವೀನ್ ಮೂಡುಶೆಡ್ಡೆ ಮತ್ತಿತರ ಪ್ರಮುಖರು ಹಾಜರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!