ಜನ ಮನದ ನಾಡಿ ಮಿಡಿತ

Advertisement

ಬೆಳ್ತಂಗಡಿಯಲ್ಲಿ ಸರಣಿ ಅಪಘಾತ: ಟಿಪ್ಪರ್ ಚಾಲಕನ ನಿರ್ಲಕ್ಯಕ್ಕೆ ಹಲವು ವಾಹನಗಳು ಜಖಂ, ಯುವತಿ ಗಂಬೀರ

ಬೆಳ್ತಂಗಡಿ: ಅತಿವೇಗ ಹಾಗೂ ನಿರ್ಲಕ್ಯದ ಚಾಲನೆಯ ಹಿನ್ನಲೆ ಸರಣಿ ಅಪಾಘಾತ ನಡೆದಿದ್ದು ಘಟನೆಯಲ್ಲಿ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಟಿಪ್ಪರ್ ಚಾಲಕನ ಅತಿವೇಗದ, ನಿರ್ಲಕ್ಷ್ಯದ ಚಾಲನೆಯಿಂದ ಎರಡು ಬಸ್, ನಾಲ್ಕು ಕಾರು, ಒಂದು ಆಟೋ ರಿಕ್ಷಾ ಮತ್ತು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಢಿಕ್ಕಿ ಹೊಡೆದಿದೆ.
ಉಜಿರೆಯಿಂದ ಗುರುವಾಯನಕೆರೆ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಎದುರಿನಿಂದ ಸಂಚರಿಸುತ್ತಿದ್ದ ಬಸ್ ಗೆ ಡಿಕ್ಕಿ
ಹೊಡೆದಿದೆ. ನಂತರ ಇನ್ನೊಂದು ಬಸ್ಸಿನ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಎರಡನೆ ಬಾರಿ ಡಿಕ್ಕಿ ಹೊಡೆದ ರಭಸಕ್ಕೆ ಟಿಪ್ಪರ್ ಏಕಾಏಕಿ ಶೋರೂಂ ಕಡೆಗೆ ತಿರುಗಿ ರಸ್ತೆಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಢಿಕ್ಕಿ ಹೊಡೆದು ಶೋರೂಂ ಎದುರು ನಿಲ್ಲಿಸಿದ್ದ ನಾಲ್ಕು ಕಾರು ಹಾಗೂ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಯುವತಿಯನ್ನು ಬಳಂಜ ಗ್ರಾಮದ ಗುಂಡೇರಿ ನಿವಾಸಿಯಾದ ವೀಕ್ಷಾ (17) ಎಂದು ಗುರುತಿಸಲಾಗಿದೆ. ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿ ವೀಕ್ಷಾ ತನ್ನ ಸ್ನೇಹಿತೆಯೊಂದಿಗೆ ಕಂಪ್ಯೂಟರ್‌ ತರಗತಿಗೆ ಹಾಜರಾಗಲು ನಡೆದುಕೊಂಡು ಹೋಗುತ್ತಿದ್ದಳು. ಮತ್ತೋರ್ವ ಬಾಲಕಿ ಟಿಪ್ಪರ್‌ನ ಚಕ್ರದಡಿ ಸಿಲುಕಿ ಕೂದಲೆಳೆಯಂತರದಲ್ಲಿ ಪಾರಾಗಿದ್ದಾಳೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಟಿಪ್ಪರ್ ಚಾಲಕ ಸುರೇಶ್ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!