ಬೆಳ್ತಂಗಡಿ: ಅತಿವೇಗ ಹಾಗೂ ನಿರ್ಲಕ್ಯದ ಚಾಲನೆಯ ಹಿನ್ನಲೆ ಸರಣಿ ಅಪಾಘಾತ ನಡೆದಿದ್ದು ಘಟನೆಯಲ್ಲಿ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಟಿಪ್ಪರ್ ಚಾಲಕನ ಅತಿವೇಗದ, ನಿರ್ಲಕ್ಷ್ಯದ ಚಾಲನೆಯಿಂದ ಎರಡು ಬಸ್, ನಾಲ್ಕು ಕಾರು, ಒಂದು ಆಟೋ ರಿಕ್ಷಾ ಮತ್ತು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಢಿಕ್ಕಿ ಹೊಡೆದಿದೆ.
ಉಜಿರೆಯಿಂದ ಗುರುವಾಯನಕೆರೆ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಎದುರಿನಿಂದ ಸಂಚರಿಸುತ್ತಿದ್ದ ಬಸ್ ಗೆ ಡಿಕ್ಕಿ
ಹೊಡೆದಿದೆ. ನಂತರ ಇನ್ನೊಂದು ಬಸ್ಸಿನ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಎರಡನೆ ಬಾರಿ ಡಿಕ್ಕಿ ಹೊಡೆದ ರಭಸಕ್ಕೆ ಟಿಪ್ಪರ್ ಏಕಾಏಕಿ ಶೋರೂಂ ಕಡೆಗೆ ತಿರುಗಿ ರಸ್ತೆಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಢಿಕ್ಕಿ ಹೊಡೆದು ಶೋರೂಂ ಎದುರು ನಿಲ್ಲಿಸಿದ್ದ ನಾಲ್ಕು ಕಾರು ಹಾಗೂ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಯುವತಿಯನ್ನು ಬಳಂಜ ಗ್ರಾಮದ ಗುಂಡೇರಿ ನಿವಾಸಿಯಾದ ವೀಕ್ಷಾ (17) ಎಂದು ಗುರುತಿಸಲಾಗಿದೆ. ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿ ವೀಕ್ಷಾ ತನ್ನ ಸ್ನೇಹಿತೆಯೊಂದಿಗೆ ಕಂಪ್ಯೂಟರ್ ತರಗತಿಗೆ ಹಾಜರಾಗಲು ನಡೆದುಕೊಂಡು ಹೋಗುತ್ತಿದ್ದಳು. ಮತ್ತೋರ್ವ ಬಾಲಕಿ ಟಿಪ್ಪರ್‌ನ ಚಕ್ರದಡಿ ಸಿಲುಕಿ ಕೂದಲೆಳೆಯಂತರದಲ್ಲಿ ಪಾರಾಗಿದ್ದಾಳೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಟಿಪ್ಪರ್ ಚಾಲಕ ಸುರೇಶ್ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…