ದಿಲ್ಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಆಯ್ಕೆಯಾಗಿದ್ದಾರೆ. ಅವರು ಅರವಿಂದ ಕೇಜ್ರಿವಾಲರ ಉತ್ತರಾಧಿಕಾರಿಯಾಗಿದ್ದು, ಅರವಿಂದ ಕೇಜ್ರಿವಾಲ್ ಅವರು ಎರಡು ದಿನಗಳ ಹಿಂದೆ ನಲವತ್ತೆಂಟು ಗಂಟೆಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ರು.
ಅದರಂತೆ ಇಂದು ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಎಎಪಿ ಶಾಸಕಾಂಗ ಪಕ್ಷ ಸಭೆಯಲ್ಲಿ ಅರವಿಂದ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಅತಿಶಿ ಅವರ ಹೆಸರನ್ನು ಸೂಚಿಸಿದ್ದು, ಶಾಸಕಾಂಗ ಸಭೆ ಅವರನ್ನು ಆಯ್ಕೆ ಮಾಡಿತು. ಸಚಿವೆ ಅತಿಶಿ ಅವರು ಅರವಿಂದ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರು ಜೈಲಿನಲ್ಲಿದ್ದಾಗ ಬಿಜೆಪಿಯ ಪ್ರಮುಖ ಟೀಕಾಕಾರರಾಗಿ ಮೂಡಿ ಬಂದಿದ್ದರು. ಅವರು ಸರಕಾರದಲ್ಲಿ ಹಲವು ಖಾತೆಗಳನ್ನು ನಿರ್ವಹಿಸಿದ ಅನುಭವಿ. ಈ ನಡುವೆ ದಿಲ್ಲಿ ವಿಧಾನಸಭೆಗೆ ನವೆಂಬರ್ ತಿಂಗಳಲ್ಲಿ ಚುನಾವಣೆ ನಡೆಸುವಂತೆ ಕೇಜ್ರಿವಾಲ್ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…