ಕರಾವಳಿ

ಆಪಲ್ ಐ ಫೋನ್ ಸರ್ವಿಸ್ ಸೆಂಟರ್ ವಿರುದ್ಧ ಮೊಬೈಲ್ ರಿಟೇಲರ್ಸ್ ಪ್ರತಿಭಟನೆ…!

ಮಂಗಳೂರು: ಆಪಲ್ ಐ ಫೋನ್ ಸರ್ವಿಸ್ ಸೆಂಟರ್ ವಿರುದ್ಧ ರಿಟೇಲರ್ ಹಾಗೂ ಗ್ರಾಹಕರ ಬೃಹತ್ ಪ್ರತಿಭಟನಾ ಜಾಥಾ ಮಂಗಳವಾರ ನಗರದಲ್ಲಿ ಜರುಗಿತು.

ಜ್ಯೋತಿ ಸರ್ಕಲ್ ನಿಂದ ಆಪಲ್ ನ ಸರ್ವಿಸ್ ಸೆಂಟರ್ ಮ್ಯಾಪಲ್ ನ ಎದುರುಗಡೆಯಿಂದ ಕ್ಲಾಕ್ ಟವರ್ ವರಗೆ ಮೆರವಣಿಗೆಯಲ್ಲಿ ಸಾಗಿಬಂ

ದ ಪ್ರತಿಭಟನಾಕಾರರು ಕ್ಲಾಕ್ ಟವರ್ ಬಳಿ ತಮ್ಮ ಬೇಡಿಕೆಗಳನ್ನು ಕೂಡಲೇ ಪೂರೈಸುವಂತೆ ಸಂಸ್ಥೆಯನ್ನು ಆಗ್ರಹಿಸಿದರು.ಈ ವೇಳೆ ಮಾತಾಡಿದ ಶೈಲೇಂದ್ರ ಸರಳಾಯ ಅವರು, “ನಮ್ಮಲ್ಲಿ ಹಾಗು ಬೇರೆ ಕಡೆ ಮೊಬೈಲ್ ಖರೀದಿಸಿದ ಹಲವು ಗ್ರಾಹಕರು ಆಪಲ್ IOS UPDATE ನಂತರ ಮೊಬೈಲ್ ಸ್ಕ್ರೀನ್ ನಲ್ಲಿ ಲೈನ್ ಅಥವಾ ಸ್ಕ್ರೀನ್ ಬ್ಲ್ಯಾಂಕ್ ಆಗುವಂತಹ ಸಮಸ್ಯೆ ಎದುರಾಗಿದೆ. ಈ ಸಮಸ್ಯೆಯಿಂದ ನೊಂದ ಗ್ರಾಹಕರು ಆಪಲ್ ನ ಸರ್ವಿಸ್ ಸೆಂಟರ್ ಮ್ಯಾಪಲ್ ಅನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸಲು ಕೋರಿದಾಗ ಅವರ ಉಡಾಫೆ ಉತ್ತರ ಗ್ರಾಹಕರಿಗೆ ಆಘಾತ ಉಂಟು ಮಾಡಿದೆ. ಗ್ರಾಹಕರ ಹಿತದೃಷ್ಟಿಯಿಂದ, ಆಪಲ್ ನ ಮ್ಯಾಪಲ್ ಸರ್ವಿಸ್ ಸೆಂಟರ್‌ ನ ಕಳಪೆ ಸೇವೆಗಳ ವಿರುದ್ಧ ಪ್ರತಿಭಟನೆ ನಡೆಸಿದ್ದೇವೆ“ ಎಂದರು.
ಬಳಿಕ ಮಾತಾಡಿದ ದಕ್ಷಿಣ ಕನ್ನಡ ಮತ್ತು ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ ಸಂಘಟನೆಯ ರಾಜ್ಯ ಸುದ್ದಿ ಮತ್ತು ಮಾಧ್ಯಮ ನಿರ್ವಾಹಕ ವಿವೇಕ್ ಜಿ ಸುವರ್ಣ ಅವರು, ”ಇದೇ ಮೊದಲ ಬಾರಿಗೆ ಸ್ಥಳೀಯ ರೀಟೇಲರ್ ಗಳು ತಮ್ಮ ಗ್ರಾಹಕರಿಗೋಸ್ಕರ ಬೀದಿಗೆ ಇಳಿದು ಪ್ರತಿಭಟಿಸುತ್ತಿದ್ದಾರೆ. ಇದರಲ್ಲಿ ಹಲವು ನೊಂದ ಗ್ರಾಹಕರು ಪಾಲ್ಗೊಳ್ಳುತ್ತಿದ್ದಾರೆ. ಕಂಪೆನಿ ಸ್ಪಂದಿಸದೆ ಇದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದ್ದೇವೆ“ ಎಂದರು.

ಸಂಘಟನೆಯ ಚೇರ್ ಮೆನ್ ಗುರುದತ್ ಕಾಮತ್, ಅಧ್ಯಕ್ಷ ರಾಜೇಶ್ ಮಾಬಿಯಾನ್, ಕಾರ್ಯದರ್ಶಿ ಇಮ್ರಾನ್, ಸ್ಥಾಪಕ ಅಧ್ಯಕ್ಷ ಸಲೀಮ್, ಉಪಾಧ್ಯಕ್ಷ ಅಝರ್ ಮೊಹಮದ್ ಮತ್ತಿತರರು ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಮತು ಉಡುಪಿ ಮೊಬೈಲ್ ರಿಟೇಲರ್ ಅಸೋಸಿಯೇಶನ್ ಅವರ ಪ್ರಮುಖ ಬೇಡಿಕೆಗಳು.
ಸಾಫ್ಟ್‌ವೇರ್ ಅಪ್ಲೇಟ್‌ನಿಂದ ಹಾನಿಗೊಂಡ ಡಿಸ್ಟ್ ಗಳ ಉಚಿತ ಬದಲಾವಣೆ.ಸ್ವತಂತ್ರ ಆಪಲ್ ಸೇವಾ ಕೇಂದ್ರಗಳು.
ರಿಜಿಸ್ಟ್ರೇಷನ್ ಫೀಸ್ ವಸೂಲಿ ಮಾಡದಿರುವುದು.
ಬಳಕೆದಾರರು ತಮ್ಮದೇ ಆದ ಸಾಧನಗಳನ್ನು ಸರಿಪಡಿಸಲು ಅಥವಾ ತೃತೀಯ ಪಾರ್ಟಿ ತಂತ್ರಜ್ಞರಿಂದ ಸರಿಪಡಿಸಲು ಅವಕಾಶವನ್ನು ಒದಗಿಸಬೇಕು.
ಗ್ರಾಹರನ್ನು ಕಡೆಗಣನೆ ಮಾಡದಿರುವುದು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…

11 hours ago

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…

11 hours ago

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…

11 hours ago

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…

11 hours ago

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…

11 hours ago

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…

11 hours ago