ಜನ ಮನದ ನಾಡಿ ಮಿಡಿತ

Advertisement

ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು….!!

ಬಂಟ್ವಾಳ: ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಂಚಿಯಲ್ಲಿ ನಡೆದಿದೆ.

ಮಂಚಿ ಗ್ರಾಮದ ಮೋಂತಿಮಾರು ನಿವಾಸಿ ಆಸ್ಮ ಎಂಬವರ ಮನೆಯಿಂದ ಕಳವು ನಡೆದಿದೆ.‌‌ಸೆ.16 ರಂದು ಸೋಮವಾರ ಬೆಳಿಗ್ಗೆ ಈದ್ ಮಿಲಾದ್ ‌ಹಬ್ಬದ ಪ್ರಯುಕ್ತ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನೋಡಲು ಮನೆಗೆ ಬೀಗ ಹಾಕಿ ಮಸೀದಿಗೆ ತೆರಳಿದ್ದ ವೇಳೆ ಈ ಕಳ್ಳತನ ನಡೆದಿದೆ ಎನ್ನಲಾಗಿದೆ.

 


ರಾತ್ರಿ 12.45 ಗಂಟೆಗೆ ಮಸೀದಿಯಿಂದ ವಾಪಸು ಮನೆಗೆ ಬಂದು ನೋಡಿದಾಗ ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ತುಂಡು ಮಾಡಿ ಮನೆಯ ಒಳಗೆ ಪ್ರವೇಶ ಮಾಡಿ , ಬೆಡ್ ರೂಮಿನಲ್ಲಿರುವ ಕಪಾಟು ಬೀಗ ತೆಗೆದು ಅದರೊಳಗೆ ಇರಿಸಿಲಾಗಿದ್ದ ಸುಮಾರು1 ಲಕ್ಷ 33 ಸಾವಿರ ರೂ ಮೌಲ್ಯದ ಚಿನ್ನ ಹಾಗೂ ನಗದು ಕಳವು ಮಾಡಲಾಗಿದೆ.ರೂ.72 ಸಾವಿರ ಮೌಲ್ಯದ ಅರ್ಧ ಪವನ್ ತೂಕದ ಚಿನ್ನದ ಸರ,ರೂ. 24 ಸಾವಿರ ಮೌಲ್ಯದ ಅರ್ಧ ಪವನ್ ಚಿನ್ನದ ಉಂಗುರ ,ರೂ.12 ಸಾವಿರ ಮೌಲ್ಯದ 2 ಗ್ರಾಂ ತೂಕದ ಬ್ರಾಸ್ ಲೈಟ್ , ಹಾಗೂ 25 ಸಾವಿರ ರೂ ನಗದನ್ನು ಕಳವು ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್. ಐ.ಹರೀಶ್ ಅವರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!