ಬಂಟ್ವಾಳ: ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಂಚಿಯಲ್ಲಿ ನಡೆದಿದೆ.
ಮಂಚಿ ಗ್ರಾಮದ ಮೋಂತಿಮಾರು ನಿವಾಸಿ ಆಸ್ಮ ಎಂಬವರ ಮನೆಯಿಂದ ಕಳವು ನಡೆದಿದೆ.ಸೆ.16 ರಂದು ಸೋಮವಾರ ಬೆಳಿಗ್ಗೆ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನೋಡಲು ಮನೆಗೆ ಬೀಗ ಹಾಕಿ ಮಸೀದಿಗೆ ತೆರಳಿದ್ದ ವೇಳೆ ಈ ಕಳ್ಳತನ ನಡೆದಿದೆ ಎನ್ನಲಾಗಿದೆ.
ರಾತ್ರಿ 12.45 ಗಂಟೆಗೆ ಮಸೀದಿಯಿಂದ ವಾಪಸು ಮನೆಗೆ ಬಂದು ನೋಡಿದಾಗ ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ತುಂಡು ಮಾಡಿ ಮನೆಯ ಒಳಗೆ ಪ್ರವೇಶ ಮಾಡಿ , ಬೆಡ್ ರೂಮಿನಲ್ಲಿರುವ ಕಪಾಟು ಬೀಗ ತೆಗೆದು ಅದರೊಳಗೆ ಇರಿಸಿಲಾಗಿದ್ದ ಸುಮಾರು1 ಲಕ್ಷ 33 ಸಾವಿರ ರೂ ಮೌಲ್ಯದ ಚಿನ್ನ ಹಾಗೂ ನಗದು ಕಳವು ಮಾಡಲಾಗಿದೆ.ರೂ.72 ಸಾವಿರ ಮೌಲ್ಯದ ಅರ್ಧ ಪವನ್ ತೂಕದ ಚಿನ್ನದ ಸರ,ರೂ. 24 ಸಾವಿರ ಮೌಲ್ಯದ ಅರ್ಧ ಪವನ್ ಚಿನ್ನದ ಉಂಗುರ ,ರೂ.12 ಸಾವಿರ ಮೌಲ್ಯದ 2 ಗ್ರಾಂ ತೂಕದ ಬ್ರಾಸ್ ಲೈಟ್ , ಹಾಗೂ 25 ಸಾವಿರ ರೂ ನಗದನ್ನು ಕಳವು ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್. ಐ.ಹರೀಶ್ ಅವರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…