ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮನಪಾ ಮೇಯರ್ ಆಗಿ ಮನೋಜ್ ಕುಮಾರ್ ಅವಿರೋಧ ಆಯ್ಕೆ, ಉಪಮೇಯರ್ ಆಗಿ ಭಾನುಮತಿ

ಮಂಗಳೂರು: ಮಂಗಳೂರಿನ 25ನೇ ಅವಧಿಯ ಮೇಯರ್ ಆಗಿ ಮನೋಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಆಗಿ ಭಾನುಮತಿ ಅವರು ಆಯ್ಕೆಯಾಗಿದ್ದಾರೆ.

 

ಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿ(ಎಸ್‌ಸಿ) ಹಾಗೂ ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗ ‘ಎ’ ನಿಗದಿಯಾಗಿತ್ತು. ಬಿಜೆಪಿ ಬಹುಮತ ಹೊಂದಿದ್ದರೂ ವಿರೋಧ ಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದು ವಾಡಿಕೆ. ಆದರೆ ಕಾಂಗ್ರೆಸ್‌ನಲ್ಲಿ ಪರಿಶಿಷ್ಟ ಜಾತಿ(ಎಸ್‌ಸಿ) ಮೀಸಲು ಅಭ್ಯರ್ಥಿ ಇಲ್ಲದ ಹಿನ್ನೆಲೆಯಲ್ಲಿ ಮೇಯರ್ ಆಗಿ ಮನೋಜ್ ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮನೋಜ್ ಕುಮಾರ್ ಅವರು 2ಉಮೇದುವಾರಿಕೆ ಸಲ್ಲಿಸಿದ್ದು, ಎರಡೂ ಸ್ವೀಕೃತಗೊಂಡಿದೆ.

ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಭಾನುಮತಿ ಹಾಗೂ ವನಿತಾ ಪ್ರಸಾದ್, ಕಾಂಗ್ರೆಸ್‌ನಿಂದ ಜೀನತ್ ಸಂಶುದ್ದೀನ್ ಸ್ಪರ್ಧಾ ಕಣದಲ್ಲಿದ್ದರು. ಭಾನುಮತಿಯವರು ಎರಡು ಉಮೇದುವಾರಿಕೆ ಸಲ್ಲಿಸಿದ್ದು, ಜಾತಿಪ್ರಮಾಣ ಪತ್ರ ಸಲ್ಲಿಸದ ಕಾರಣ ಒಂದು ನಾಮಪತ್ರ ತಿರಸ್ಕೃತಗೊಂಡಿತು. ಚುನಾವಣಾ ಅಧಿಕಾರಿ ಉಮೇದುವಾರಿಕೆ ಹಿಂದೆಗೆದುಕೊಳ್ಳಲು 5ನಿಮಿಷ ಅವಕಾಶ ನೀಡಿದ್ದು, ವನಿತಾ ಪ್ರಸಾದ್ ನಾಮಪತ್ರ ಹಿಂದೆಗೆಕೊಂಡರು. ಈ ಹಿನ್ನೆಲೆಯಲ್ಲಿ ಜೀನತ್ ಸಂಶುದ್ದೀನ್ ಹಾಗೂ ಭಾನುಮತಿಯವರು ಚುನಾವಣಾ ಕಣದಲ್ಲಿದ್ದರು. ಜೀನತ್ ಸಂಶುದ್ದೀನ್ ಪರ 14ಮತ ಬಿದ್ದರೆ, ಭಾನುಮತಿಯವರಿಗೆ 47 ಮತ ಚಲಾವಣೆಯಾಯಿತು. ಈ ಮೂಲಕ ಭಾನುಮತಿಯವರು ಉಪಮೇಯರ್ ಆಗಿ ಆಯ್ಕೆಯಾದರು.

ತರಿಗೆ ಹಣಕಾಸು ಸ್ಥಾಯಿ ಸಮಿತಿ, ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ, ಪಟ್ಟಣ ಯೋಜನೆ ಸುಧಾರಣೆ ಸ್ಥಾಯೀಸಮಿತಿ, ಲೆಕ್ಕಪತ್ರ ಸ್ಥಾಯಿಸಮಿತಿ ಸೇರಿದಂತೆ ನಾಲ್ಕು ಸ್ಥಾಯಿಸಮಿತಿಗೆ ತಲಾ ಏಳೇಳು ಮಂದಿ ಸದಸ್ಯರಂತೆ ಅವಿರೋಧವಾಗಿ ಆಯ್ಕೆಯಾದರು. ಚುನಾವಣೆ ನಡೆದ ವೇಳೆ 65 ಮನಪಾ ಸದಸ್ಯರಲ್ಲಿ 61ಮಂದಿ ಹಾಜರಿದ್ದು, ಚುನಾವಣೆಯಲ್ಲಿ ಪಾಲ್ಗೊಂಡರು. ಮೈಸೂರು ಪ್ರಾದೇಶಿಕ ಆಯುಕ್ತ ರಮೇಶ್ ಡಿ.ಎಸ್. ಚುನಾವಣಾ ಅಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆ ನಡೆಸಿದರು.

ನೂತನವಾಗಿ ಮೇಯರ್, ಉಪ ಮೇಯರ್‌ಗಳಿಗೆ ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಮನಪಾ ಸದಸ್ಯರು, ಅಭಿಮಾನಿಗಳು ಅಭಿನಂದಿಸಿದರು.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!