ಮಂಗಳೂರು: ಮಂಗಳೂರಿನ 25ನೇ ಅವಧಿಯ ಮೇಯರ್ ಆಗಿ ಮನೋಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಆಗಿ ಭಾನುಮತಿ ಅವರು ಆಯ್ಕೆಯಾಗಿದ್ದಾರೆ.
ಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿ(ಎಸ್‌ಸಿ) ಹಾಗೂ ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗ ‘ಎ’ ನಿಗದಿಯಾಗಿತ್ತು. ಬಿಜೆಪಿ ಬಹುಮತ ಹೊಂದಿದ್ದರೂ ವಿರೋಧ ಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದು ವಾಡಿಕೆ. ಆದರೆ ಕಾಂಗ್ರೆಸ್‌ನಲ್ಲಿ ಪರಿಶಿಷ್ಟ ಜಾತಿ(ಎಸ್‌ಸಿ) ಮೀಸಲು ಅಭ್ಯರ್ಥಿ ಇಲ್ಲದ ಹಿನ್ನೆಲೆಯಲ್ಲಿ ಮೇಯರ್ ಆಗಿ ಮನೋಜ್ ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮನೋಜ್ ಕುಮಾರ್ ಅವರು 2ಉಮೇದುವಾರಿಕೆ ಸಲ್ಲಿಸಿದ್ದು, ಎರಡೂ ಸ್ವೀಕೃತಗೊಂಡಿದೆ.
ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಭಾನುಮತಿ ಹಾಗೂ ವನಿತಾ ಪ್ರಸಾದ್, ಕಾಂಗ್ರೆಸ್‌ನಿಂದ ಜೀನತ್ ಸಂಶುದ್ದೀನ್ ಸ್ಪರ್ಧಾ ಕಣದಲ್ಲಿದ್ದರು. ಭಾನುಮತಿಯವರು ಎರಡು ಉಮೇದುವಾರಿಕೆ ಸಲ್ಲಿಸಿದ್ದು, ಜಾತಿಪ್ರಮಾಣ ಪತ್ರ ಸಲ್ಲಿಸದ ಕಾರಣ ಒಂದು ನಾಮಪತ್ರ ತಿರಸ್ಕೃತಗೊಂಡಿತು. ಚುನಾವಣಾ ಅಧಿಕಾರಿ ಉಮೇದುವಾರಿಕೆ ಹಿಂದೆಗೆದುಕೊಳ್ಳಲು 5ನಿಮಿಷ ಅವಕಾಶ ನೀಡಿದ್ದು, ವನಿತಾ ಪ್ರಸಾದ್ ನಾಮಪತ್ರ ಹಿಂದೆಗೆಕೊಂಡರು. ಈ ಹಿನ್ನೆಲೆಯಲ್ಲಿ ಜೀನತ್ ಸಂಶುದ್ದೀನ್ ಹಾಗೂ ಭಾನುಮತಿಯವರು ಚುನಾವಣಾ ಕಣದಲ್ಲಿದ್ದರು. ಜೀನತ್ ಸಂಶುದ್ದೀನ್ ಪರ 14ಮತ ಬಿದ್ದರೆ, ಭಾನುಮತಿಯವರಿಗೆ 47 ಮತ ಚಲಾವಣೆಯಾಯಿತು. ಈ ಮೂಲಕ ಭಾನುಮತಿಯವರು ಉಪಮೇಯರ್ ಆಗಿ ಆಯ್ಕೆಯಾದರು.
ತರಿಗೆ ಹಣಕಾಸು ಸ್ಥಾಯಿ ಸಮಿತಿ, ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ, ಪಟ್ಟಣ ಯೋಜನೆ ಸುಧಾರಣೆ ಸ್ಥಾಯೀಸಮಿತಿ, ಲೆಕ್ಕಪತ್ರ ಸ್ಥಾಯಿಸಮಿತಿ ಸೇರಿದಂತೆ ನಾಲ್ಕು ಸ್ಥಾಯಿಸಮಿತಿಗೆ ತಲಾ ಏಳೇಳು ಮಂದಿ ಸದಸ್ಯರಂತೆ ಅವಿರೋಧವಾಗಿ ಆಯ್ಕೆಯಾದರು. ಚುನಾವಣೆ ನಡೆದ ವೇಳೆ 65 ಮನಪಾ ಸದಸ್ಯರಲ್ಲಿ 61ಮಂದಿ ಹಾಜರಿದ್ದು, ಚುನಾವಣೆಯಲ್ಲಿ ಪಾಲ್ಗೊಂಡರು. ಮೈಸೂರು ಪ್ರಾದೇಶಿಕ ಆಯುಕ್ತ ರಮೇಶ್ ಡಿ.ಎಸ್. ಚುನಾವಣಾ ಅಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆ ನಡೆಸಿದರು.
ನೂತನವಾಗಿ ಮೇಯರ್, ಉಪ ಮೇಯರ್‌ಗಳಿಗೆ ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಮನಪಾ ಸದಸ್ಯರು, ಅಭಿಮಾನಿಗಳು ಅಭಿನಂದಿಸಿದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…