ಮುಲ್ಕಿ: ಇಲ್ಲಿಗೆ ಸಮೀಪದ ತೋಕೂರು ನಿವಾಸಿ ಅಜಿತ್ ಕುಮಾರ್ ಬೇಕಲ್ (67) ಹೃದಯಾಘಾತದಿಂದ ಶನಿವಾರ ಬೆಳಗ್ಗೆ ನಿಧನರಾದರು. ಅವರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಅವರು ಹಳೆಯಂಗಡಿ ನೇಕಾರ ಸಹಕಾರಿ ಸಂಘದಲ್ಲಿ ಉದ್ಯೋಗಿಯಾಗಿ ನಿವೃತ್ತಿ ಹೊಂದಿದ್ದರು,ಪಾವಂಜೆ ಜ್ಞಾನ ಶಕ್ತಿ ಸುಬ್ರಮಣ್ಯ ದೇವಸ್ಥಾನದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಉತ್ತಮ ಸಮಾಜ ಸೇವಕ, ನಾಟಕ ರಂಗದಲ್ಲಿ ತೆರೆಮರೆಯ ಕಲಾವಿದರಾಗಿ ಜನಾನುರಾಗಿಯಾಗಿದ್ದರು. ಅವರ ನಿಧನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯ ಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಕೆಪಿಸಿಸಿ ಸದಸ್ಯ ವಸಂತ್ ಬೆರ್ನಾಡ್, ಪಡುಪಣಂಬೂರು ಗ್ರಾಪಂ ಅಧ್ಯಕ್ಷೆ ಕುಸುಮಾ ಚಂದ್ರಶೇಖರ್, ಉಪಾಧ್ಯಕ್ಷ ಹೇಮನಾಥ ಅಮೀನ್,ಸದಸ್ಯ ವಿನೋದ್ ಸಾಲ್ಯಾನ್, ಹಳೆಯಂಗಡಿ ಪಿಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಭಟ್, ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ಗುರುರಾಜ್ ಎಸ್ ಪೂಜಾರಿ, ಗೌತಮ್ ಜೈನ್ ಮುಲ್ಕಿ ಅರಮನೆ, ರಂಗಕರ್ಮಿ ಜನಾರ್ಧನ ಪಡುಪಣಂಬೂರು, ಮುಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ,ಸಾಮಾಜಿಕ ಕಾರ್ಯಕರ್ತ ಧರ್ಮಾನಂದ ಶೆಟ್ಟಿಗಾರ್,ಶ್ರೀ ಸುಬ್ರಮಣ್ಯ ಸ್ಪೋರ್ಟ್ ಕ್ಲಬ್ ನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಶ್ರೀ ಪಾವಂಜೆ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.



