ಜನ ಮನದ ನಾಡಿ ಮಿಡಿತ

Advertisement

ತೋಕೂರು ನಿವಾಸಿ ಅಜಿತ್ ಕುಮಾರ್ ಬೇಕಲ್ ಹೃದಯಾಘಾತದಿಂದ ನಿಧನ..!

ಮುಲ್ಕಿ: ಇಲ್ಲಿಗೆ ಸಮೀಪದ ತೋಕೂರು ನಿವಾಸಿ ಅಜಿತ್ ಕುಮಾರ್ ಬೇಕಲ್ (67) ಹೃದಯಾಘಾತದಿಂದ ಶನಿವಾರ ಬೆಳಗ್ಗೆ ನಿಧನರಾದರು. ಅವರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.


ಅವರು ಹಳೆಯಂಗಡಿ ನೇಕಾರ ಸಹಕಾರಿ ಸಂಘದಲ್ಲಿ ಉದ್ಯೋಗಿಯಾಗಿ ನಿವೃತ್ತಿ ಹೊಂದಿದ್ದರು,ಪಾವಂಜೆ ಜ್ಞಾನ ಶಕ್ತಿ ಸುಬ್ರಮಣ್ಯ ದೇವಸ್ಥಾನದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಉತ್ತಮ ಸಮಾಜ ಸೇವಕ, ನಾಟಕ ರಂಗದಲ್ಲಿ ತೆರೆಮರೆಯ ಕಲಾವಿದರಾಗಿ ಜನಾನುರಾಗಿಯಾಗಿದ್ದರು.  ಅವರ ನಿಧನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯ ಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಕೆಪಿಸಿಸಿ ಸದಸ್ಯ ವಸಂತ್ ಬೆರ್ನಾಡ್, ಪಡುಪಣಂಬೂರು ಗ್ರಾಪಂ ಅಧ್ಯಕ್ಷೆ ಕುಸುಮಾ ಚಂದ್ರಶೇಖರ್, ಉಪಾಧ್ಯಕ್ಷ ಹೇಮನಾಥ ಅಮೀನ್,ಸದಸ್ಯ ವಿನೋದ್ ಸಾಲ್ಯಾನ್, ಹಳೆಯಂಗಡಿ ಪಿಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಭಟ್, ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ಗುರುರಾಜ್ ಎಸ್ ಪೂಜಾರಿ, ಗೌತಮ್ ಜೈನ್ ಮುಲ್ಕಿ ಅರಮನೆ, ರಂಗಕರ್ಮಿ ಜನಾರ್ಧನ ಪಡುಪಣಂಬೂರು, ಮುಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ,ಸಾಮಾಜಿಕ ಕಾರ್ಯಕರ್ತ ಧರ್ಮಾನಂದ ಶೆಟ್ಟಿಗಾರ್,ಶ್ರೀ ಸುಬ್ರಮಣ್ಯ ಸ್ಪೋರ್ಟ್ ಕ್ಲಬ್ ನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಶ್ರೀ ಪಾವಂಜೆ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಅಬುಧಾಬಿ : ವಕ್ವಾಡಿ ಪ್ರವೀಣ್ ಶೆಟ್ಟಿಯವರಿಗೆ ಅಬುಧಾಬಿ ಕರ್ನಾಟಕ ಸಂಘದ ಪ್ರತಿಷ್ಠಿತ ‘ದ. ರಾ. ಬೇಂದ್ರೆ ಪ್ರಶಸ್ತಿ’

ವಿಟ್ಲ: ಕತ್ತಿ ಬೀಸಿದ ಪರಿಣಾಮ ವ್ಯಕ್ತಿ ಸಾವು: 24 ವರ್ಷದ ಯುವತಿ ಬಂಧನ

ಮಂಗಳೂರು: ವಳಾಲು ಟೋಲ್ ಆರಂಭದ ಬೆನ್ನಲ್ಲೇ ಬ್ರಹ್ಮರಕೂಟ್ಲು ಟೋಲ್‌ಗೆ ಮುತ್ತಿಗೆ

ಮಂಗಳೂರು: ಪತ್ನಿ ಹತ್ಯೆ ಪ್ರಕರಣ: ಪತಿಗೆ 5 ವರ್ಷ ಜೈಲು ಶಿಕ್ಷೆ

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ದುರಂತದ ಅಣಕು ಕಾರ್ಯಾಚರಣೆ

ಕಾಸರಗೋಡು: ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನಗರಸಭೆ ಉದ್ಯೋಗಿ ಪತ್ತೆ

ಉಡುಪಿ: ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ಪ್ರತೀಕ್ ಬಾಯಲ್

ಬಂಟ್ವಾಳ: ಬಂಟ್ವಾಳಕ್ಕೆ ಗ್ರಾಮಾಂತರ ಸೈಬರ್ ಪೊಲೀಸ್ ಠಾಣೆ ಸ್ಥಳಾಂತರ

ಬಂಟ್ವಾಳ: ಉಪ್ಪಿನಂಗಡಿ ಟೋಲ್ ವಿರೋಧಿಸಿ ಬ್ರಹ್ಮರಕೂಟ್ಲು ಟೋಲ್‌ಗೆ ಎಸ್‌ಡಿಪಿಐ ಮುತ್ತಿಗೆ

error: Content is protected !!