ಜನ ಮನದ ನಾಡಿ ಮಿಡಿತ

Advertisement

ಕಿನ್ನಿಗೋಳಿ: ಹೋಟೆಲ್‌ ಉದ್ಯಮಿ, ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಮನೆಯಲ್ಲಿ ಕಳವು ಪ್ರಕರಣ; ಮೂವರ ಬಂಧನ

ಮಂಗಳೂರು : ಹೋಟೆಲ್‌ ಉದ್ಯಮಿ, ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಯವರ ಐಕಳದ ಮನೆಯಲ್ಲಿ ನಡೆದ ಕಳವು ಪ್ರಕರಣದಲ್ಲಿ ಶಾಮೀಲಾಗಿದ್ದ ಮೂವರು ಅರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕಳವಿನ ಬಳಿಕ ಈ ಆರೋಪಿಗಳು ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದರು. ಸಿದ್ದಕಟ್ಟೆ ನಿವಾಸಿ ಹುಸೈನಬ್ಬ ಯಾನೆ ಸುಹೈಲ್ , ಕೊಲ್ನಾಡು ನಿವಾಸಿ ಝುಬೈರ್‌ ಹಾಗೂ ಕಾಸರಗೋಡು ನಿವಾಸಿ ಕಲಾಮ್‌ ಬಂಧಿತ ಆರೋಪಿಗಳಾಗಿದ್ದಾರೆ. ಈ ಪೈಕಿ ಸುಹೈಲ್ ಹಾಗೂ ಝುಬೈರ್‌ ಈ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಕಲಾಂ ಆರೋಪಿಗಳು ತಲೆ ಮರೆಸಿಕೊಳ್ಳಲು ನಕಲಿ ಪಾಸ್‌ ಪೋರ್ಟ್‌ ಮಾಡಿಸಿಕೊಟ್ಟ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

 


ಬಂಧಿತರಿಂದ ನಕಲಿ ಪಾಸ್‌ ಪೋರ್ಟ್‌, ಮೊಬೈಲ್‌ ಫೋನ್‌, ಪಿಸ್ತೂಲು, ಸಜೀವ ಮದ್ದುಗುಂಡುಗಳು, ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ಕಳೆದ ವರ್ಷ ಐಕಳದಲ್ಲಿರುವ ಉದ್ಯಮಿ ಹರೀಶ್‌ ಶೆಟ್ಟಿ ಐಕಳ ಅವರ ಮನೆಯಲ್ಲಿ ಕಳವು ಮಾಡಿದ್ದರು. ಬಳಿಕ ಕಾಸರಗೋಡು ನಿವಾಸಿ ಕಲಾಂನ ಸಹಕಾರ ಪಡೆದು ನಕಲಿ ಪಾಸ್‌ಪೋರ್ಟ್‌ ಮಾಡಿಸಿಕೊಂಡು ವಿದೇಶಕ್ಕೆ ಪಲಾಯನ ಮಾಡಿದ್ದರು. ಇತ್ತೀಚೆಗೆ ಊರಿಗೆ ಬಂದಿದ್ದ ಆರೋಪಿಗಳ ಸುಳಿವು ಪಡೆದ ಪೊಲೀಸರು ದಾಳಿ ನಡೆಸಿ ಬಂಧಿಸಿ, ಮುಲ್ಕಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೇರಿದೆ. ಮುಲ್ಕಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!