ಮಂಗಳೂರು : ಹೋಟೆಲ್ ಉದ್ಯಮಿ, ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಯವರ ಐಕಳದ ಮನೆಯಲ್ಲಿ ನಡೆದ ಕಳವು ಪ್ರಕರಣದಲ್ಲಿ ಶಾಮೀಲಾಗಿದ್ದ ಮೂವರು ಅರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕಳವಿನ ಬಳಿಕ ಈ ಆರೋಪಿಗಳು ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದರು. ಸಿದ್ದಕಟ್ಟೆ ನಿವಾಸಿ ಹುಸೈನಬ್ಬ ಯಾನೆ ಸುಹೈಲ್ , ಕೊಲ್ನಾಡು ನಿವಾಸಿ ಝುಬೈರ್ ಹಾಗೂ ಕಾಸರಗೋಡು ನಿವಾಸಿ ಕಲಾಮ್ ಬಂಧಿತ ಆರೋಪಿಗಳಾಗಿದ್ದಾರೆ. ಈ ಪೈಕಿ ಸುಹೈಲ್ ಹಾಗೂ ಝುಬೈರ್ ಈ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಕಲಾಂ ಆರೋಪಿಗಳು ತಲೆ ಮರೆಸಿಕೊಳ್ಳಲು ನಕಲಿ ಪಾಸ್ ಪೋರ್ಟ್ ಮಾಡಿಸಿಕೊಟ್ಟ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಬಂಧಿತರಿಂದ ನಕಲಿ ಪಾಸ್ ಪೋರ್ಟ್, ಮೊಬೈಲ್ ಫೋನ್, ಪಿಸ್ತೂಲು, ಸಜೀವ ಮದ್ದುಗುಂಡುಗಳು, ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ಕಳೆದ ವರ್ಷ ಐಕಳದಲ್ಲಿರುವ ಉದ್ಯಮಿ ಹರೀಶ್ ಶೆಟ್ಟಿ ಐಕಳ ಅವರ ಮನೆಯಲ್ಲಿ ಕಳವು ಮಾಡಿದ್ದರು. ಬಳಿಕ ಕಾಸರಗೋಡು ನಿವಾಸಿ ಕಲಾಂನ ಸಹಕಾರ ಪಡೆದು ನಕಲಿ ಪಾಸ್‌ಪೋರ್ಟ್ ಮಾಡಿಸಿಕೊಂಡು ವಿದೇಶಕ್ಕೆ ಪಲಾಯನ ಮಾಡಿದ್ದರು. ಇತ್ತೀಚೆಗೆ ಊರಿಗೆ ಬಂದಿದ್ದ ಆರೋಪಿಗಳ ಸುಳಿವು ಪಡೆದ ಪೊಲೀಸರು ದಾಳಿ ನಡೆಸಿ ಬಂಧಿಸಿ, ಮುಲ್ಕಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೇರಿದೆ. ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…