ಜನ ಮನದ ನಾಡಿ ಮಿಡಿತ

Advertisement

ಕಾರವಾರ: ಶ್ರೀಮಂತ ಉದ್ಯಮಿ ವಿನಾಯಕ ನಾಯ್ಕ ಅವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು…! 

ಕಾರವಾರ: ಶ್ರೀಮಂತ ಉದ್ಯಮಿ ವಿನಾಯಕ ನಾಯ್ಕ ಅವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು…!

ಕಾರವಾರ: ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯೊಬ್ಬರನ್ನು ಬೆಳ್ಳಂಬೆಳಗ್ಗೆ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿ ವಿನಾಯಕ ನಾಯ್ಕ (52) ಕೊಲೆಯಾದ ವ್ಯಕ್ತಿ. ಕಾರವಾರ ತಾಲೂಕಿನ ಹಣಕೊಣ ಗ್ರಾಮದ ಮನೆಯಲ್ಲಿ ನಸುಕಿನ ಜಾವ ನಡೆದ ಘಟನೆ ನಡೆದಿದೆ.

 

ಅಪರಿಚಿತರರು ಏಕಾಏಕಿ ಬಂದು ವಿನಾಯಕ ದಂಪತಿ ಮೇಳೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಮಚ್ಚಿನ ಏಟಿಗೆ ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಾಕೆಯನ್ನ ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

 

ಉದ್ಯಮಿ ವಿನಾಯಕ ನಾಯ್ಕ ತಮ್ಮ ಪತ್ನಿಯೊಂದಿಗೆ ಕಳೆದ ವಾರ ಗ್ರಾಮ ದೇವರ ಜಾತ್ರೆಗೆಂದು ಹಣಕೊಣ ಗ್ರಾಮಕ್ಕೆ ಬಂದಿದ್ದರು. ಭಾನುವಾರ ಬೆಳಗ್ಗೆ ಪುಣೆಗೆ ಹೋಗುವುದಾಗಿ ಸ್ನೇಹಿತರಿಗೆ ತಿಳಿಸಿದ್ದರು. ಅಷ್ಟರಲ್ಲೇ ಕೊಲೆ ನಡೆದಿರುವುದು ಭಾರಿ ಅನುಮಾನ ಹುಟ್ಟಿಸಿದೆ. ಕೊಲೆ ಯಾರೂ ಮಾಡಿದ್ರು ಮತ್ತು ಯಾಕೆ ಮಾಡಿದ್ದಾರೆ, ಕೊಲೆಯ ಹಿಂದಿನ ಮರ್ಮ ಇನ್ನಷ್ಟೇ ತಿಳಿಯಬೇಕಿದೆ. ಇನ್ನು ಚಿತ್ತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಘಟನೆ ನಡೆದಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!