ಕಾರವಾರ: ಶ್ರೀಮಂತ ಉದ್ಯಮಿ ವಿನಾಯಕ ನಾಯ್ಕ ಅವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು…!
ಕಾರವಾರ: ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯೊಬ್ಬರನ್ನು ಬೆಳ್ಳಂಬೆಳಗ್ಗೆ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿ ವಿನಾಯಕ ನಾಯ್ಕ (52) ಕೊಲೆಯಾದ ವ್ಯಕ್ತಿ. ಕಾರವಾರ ತಾಲೂಕಿನ ಹಣಕೊಣ ಗ್ರಾಮದ ಮನೆಯಲ್ಲಿ ನಸುಕಿನ ಜಾವ ನಡೆದ ಘಟನೆ ನಡೆದಿದೆ.
ಅಪರಿಚಿತರರು ಏಕಾಏಕಿ ಬಂದು ವಿನಾಯಕ ದಂಪತಿ ಮೇಳೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಮಚ್ಚಿನ ಏಟಿಗೆ ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಾಕೆಯನ್ನ ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಉದ್ಯಮಿ ವಿನಾಯಕ ನಾಯ್ಕ ತಮ್ಮ ಪತ್ನಿಯೊಂದಿಗೆ ಕಳೆದ ವಾರ ಗ್ರಾಮ ದೇವರ ಜಾತ್ರೆಗೆಂದು ಹಣಕೊಣ ಗ್ರಾಮಕ್ಕೆ ಬಂದಿದ್ದರು. ಭಾನುವಾರ ಬೆಳಗ್ಗೆ ಪುಣೆಗೆ ಹೋಗುವುದಾಗಿ ಸ್ನೇಹಿತರಿಗೆ ತಿಳಿಸಿದ್ದರು. ಅಷ್ಟರಲ್ಲೇ ಕೊಲೆ ನಡೆದಿರುವುದು ಭಾರಿ ಅನುಮಾನ ಹುಟ್ಟಿಸಿದೆ. ಕೊಲೆ ಯಾರೂ ಮಾಡಿದ್ರು ಮತ್ತು ಯಾಕೆ ಮಾಡಿದ್ದಾರೆ, ಕೊಲೆಯ ಹಿಂದಿನ ಮರ್ಮ ಇನ್ನಷ್ಟೇ ತಿಳಿಯಬೇಕಿದೆ. ಇನ್ನು ಚಿತ್ತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…