ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಕಂಟೇನರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಸೆ.24ರಂದು ಪೂರ್ವಾಹ್ನ 11.30ರ ವೇಳೆಗೆ ನಡೆದಿದೆ. ಘಟನೆಯಿಂದಾಗಿ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಎರಡೂ ಬದಿಯೂ ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ ಎಂದು ವರದಿಯಾಗಿದೆ.
ಬೆಂಗಳೂರು ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಂಟೈನರ್ ನಡುವೆ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬಸ್ಸಿನ ಚಾಲಕ ಗಾಯಗೊಂಡಿದ್ದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.
ಟ್ರಾಫಿಕ್ ಜಾಮ್:
ಅಪಘಾತದ ರಭಸದಿಂದಾಗಿ ಎರಡೂ ವಾಹನಗಳು ಜಖಂಗೊಂಡಿದ್ದು ರಸ್ತೆಯಲ್ಲೇ ನಿಂತಿವೆ. ಕೆಎಸ್‌ಆರ್‌ಟಿಸಿ ಬಸ್ಸನ್ನು ಹೆದ್ದಾರಿಯಿಂದ ತೆರವುಗೊಳಿಸದೇ ಇರುವುದರಿಂದ ಇಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಸುಮಾರು 1 ಗಂಟೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಹೆದ್ದಾರಿಯ ಎರಡೂ ಬದಿಯಲ್ಲೂ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದು ವಾಹನ ಚಾಲಕರು, ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ವರದಿಯಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…