ಮುಲ್ಕಿ: ನಗರ ಪಂಚಾಯತ್ ವ್ಯಾಪ್ತಿಯ ಕಾರ್ನಾಡ್ ಗಾಂಧಿ ಮೈದಾನದ ಬಳಿ ಪ್ರಾರ್ಥನಾ ಮಂದಿರದ ಆಡಳಿತ ಮಂಡಳಿಯು ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಆವರಣ ಗೋಡೆ ನಿರ್ಮಾಣ ಮಾಡುತ್ತಿದ್ದು ಈ ಬಗ್ಗೆ ಸ್ಥಳೀಯರು ಮುಲ್ಕಿ ನಗರ ಪಂಚಾಯಿತಿಗೆ ದೂರು ನೀಡಿದ್ದಾರೆ.

ಪ್ರಾರ್ಥನಾ ಮಂದಿರದ ಎದುರು ಭಾಗದ ಸರಕಾರಿ ಜಾಗದಲ್ಲಿ ಆವರಣ ಗೋಡೆ, ಸಹಿತ ವಿಶ್ರಾಂತಿ ತಂಗುದಾಣ ನಿರ್ಮಾಣ ಮಾಡಿದ್ದು ಸ್ಥಳೀಯರಾದ ಮೊಹಮ್ಮದ್ ಮತ್ತು ಶಬೀರ್ ಎಂಬವರು ನಗರ ಪಂಚಾಯಿತಿಗೆ ದೂರು ನೀಡಿದ್ದಾರೆ.
ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬಡವರಿಗೊಂದು ಕಾನೂನು ಶ್ರೀಮಂತರಿಗೊಂದು ಕಾನೂನು ಎಂಬಂತಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಈ ಬಗ್ಗೆ ನಗರ ಪಂಚಾಯತ್ ಸದಸ್ಯ ಪುತ್ತುಬಾವ ಮಾತನಾಡಿ ಅಕ್ರಮ ಆವರಣ ಗೋಡೆ ನಿರ್ಮಾಣದ ಬಗ್ಗೆ ಈಗಾಗಲೇ ಸ್ಥಳೀಯರು ನಗರ ಪಂಚಾಯತಿಗೆ ದೂರು ನೀಡಿದ್ದು ಮುಖ್ಯಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದರು.



