ಕಾಸರಗೋಡು : ಮೂರು ತಿಂಗಳ ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ ಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಕಯ್ಯಾರ್ ಕನ್ನಟಿಪ್ಪಾರೆ ಶಾಂತಿಯೋಡು ನಿವಾಸಿ ಜನಾರ್ಧನ (39) ಬಂಧಿತ. ಪತ್ನಿ ಮಂಗಳೂರು ವಾಮಂಜೂರು ಪಿಲಿಕುಳ ದ ವಿಜೇತ ( 32) ಆಗಸ್ಟ್ 18 ರಂದು ಮನೆ ಯೊಳಗೆ ಫ್ಯಾನ್ ಗೆ ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆ ಯಾಗಿದ್ದರು. ಪೊಲೀಸರು ನಡೆಸಿದ ತನಿಖೆ ಯಿಂದ ವಿಜೇತ ಆತ್ಮಹತ್ಯೆ ಕುರಿತು ಬರೆದಿಟ್ಟಿದ್ದ ಪತ್ರ ಲಭಿಸಿತ್ತು. ದೈಹಿಕ ಹಾಗೂ ಮಾನಸಿಕ ಕಿರುಕುಳ ದಿಂದ ಆತ್ಮಹತ್ಯೆ ಮಾಡಿ ಕೊಂಡಿರುವುದಾಗಿ ತನಿಖೆಯಿಂದ ಸ್ಪಷ್ಟ ಗೊಂಡಿತ್ತು.
ಇನ್ನು ವಿಜೇತ ರ ಸಾವಿಗೆ ಜನಾರ್ಧನ ನ ಕಿರುಕುಳ ಕಾರಣ ಎಂದು ತನಿಖೆಯಿಂದ ತಿಳಿದುಬಂದಿತ್ತು. ಆರೋಪಿಯನ್ನು ಕುಂಬಳೆ ಪೊಲೀಸರು ಪೊಲೀಸರು ಠಾಣೆಗೆ ಕರೆಸಿ ಬಂಧಿಸಿದ್ದಾರೆ. ಬಂಧಿತ ನನ್ನು ಕಾಸರಗೋಡು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…