ದಕ್ಷಿಣ ಕನ್ನಡ : ಶಿಕ್ಷಣವು ಜ್ಞಾನ ನೀಡುವುದರ ಜೊತೆಯಲ್ಲಿ ಬದುಕುವ ಕಲೆಯನ್ನು ಕಲಿಸುತ್ತದೆ. ಆಧುನಿಕ ಜಗತ್ತಿನ ಸವಾಲುಗಳ ಸುಳಿಯಲ್ಲಿ ಕನ್ನಡ ಭಾಷೆ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಕನ್ನಡ ಭಾಷಾಭಿಮಾನವನ್ನು ಬೆಳೆಸಿಕೊಳ್ಳುವುದರ ಮೂಲಕ ನಮ್ಮ ನಡೆ ನುಡಿ ಸಂಸ್ಕೃತಿಯನ್ನು ಉಳಿಸಿಕೊಳ್ಳಬಹುದು,ಬೆಳೆಸಿಕೊಳ್ಳಬಹುದು, ನಮ್ಮ ಅಧ್ಯಯನದ ಜೊತೆಯಲ್ಲಿ ಭಾಷಾಭಿಮಾನವನ್ನು ರೂಡಿಸಿಕೊಳ್ಳೋಣ ಎಂದು ವಿಶ್ರಾಂತ ಪ್ರಾಧ್ಯಾಪಕ ಡಾ.
ಗಣಪಯ್ಯ ಭಟ್ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಅವರು ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕದ ಆಶ್ರಯದಲ್ಲಿ ಮೂಡುಬಿದಿರೆ ರೋಟರಿ ಪದವಿ ಪೂರ್ವಕಾಲೇಜಿನಲ್ಲಿ ನಡೆದ “ಕನ್ನಡ ಚಿಂತನ” ಕಾರ್ಯಕ್ರಮದಲ್ಲಿ ಅಭಿಪ್ರಾಯ ಪಟ್ಟರು.
ಮೂಡುಬಿದಿರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪ್ರೊಫೆಸರ್ ವೇಣುಗೋಪಾಲ ಶೆಟ್ಟಿ ಅವರು ಬೆಳಗಿ ಹೋಬಳಿ ಕನ್ನಡಸಾಹಿತ್ಯ ಪರಿಷತ್ತಿನ ಕನ್ನಡ ಚಿಂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕನ್ನಡ ಭಾಷೆ ಮತ್ತು ಸಾಹಿತ್ಯದ ಹಿರಿಮೆಯನ್ನು ಕುರಿತು ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಸಂಸ್ಕೃತಿಯ ಬಗ್ಗೆ ತಿಳುವಳಿಕೆ ನೀಡಿದರು. ಮೂಡುಬಿದಿರೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ರಾಮಕೃಷ್ಣ ಶಿರೂರು ಪ್ರಸ್ತಾವಿಕ ಮಾತುಗಳನ್ನಾಡಿ ಕಾರ್ಯಕ್ರಮದ ಪ್ರಾಮುಖ್ಯತೆಯನ್ನು ತಿಳಿಸಿದರು. ರೋಟರಿ ವಿದ್ಯಾಸಂಸ್ಥೆಯ ಖಜಾಂಚಿ ಶ್ರೀ ರತ್ನಾಕರ ಜೈನ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುವ ಭಾಷೆಯ ಪ್ರಾಮುಖ್ಯತೆಯನ್ನು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ರೊಟೇರಿಯನ್ ಮೋಹನ್ ಭಟ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ರೋಟರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರವಿಕುಮಾರ್ ಅವರು ಎಲ್ಲರನ್ನು ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಯೋಗಿತಅವರು ಧನ್ಯವಾದ ಸಲ್ಲಿಸಿದರು. ಕನ್ನಡ ಉಪನ್ಯಾಸಕಿ ಶ್ರೀಮತಿ ಮಾಲತಿ ಅವರು ಕಾರ್ಯಕ್ರಮ ನಿರ್ವಹಿಸಿದರು.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…