ಪುತ್ತೂರು: ಯುವ ಬಂಟರ ದಿನಾಚರಣೆಯ ಪ್ರಯುಕ್ತ ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡಿರುವ ಪುತ್ತೂರು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜು. 23ರಂದು ನಡೆಯಲಿರುವ ತುಳುನಾಡ ಬಂಟೆರೆ ಪರ್ಬ – 2023 ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭ ಜು. 11 ರಂದು ಪುತ್ತೂರು ಬಂಟರಭವನದಲ್ಲಿ ಜರುಗಿತು.
ಉದ್ಯಮಿ, ಪುತ್ತೂರು ತಾಲೂಕು ಬಂಟರ ಸಂಘದ ನಿರ್ದೇಶಕ ಕರುಣಾಕರ ರೈ ದೇರ್ಲರವರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು. ಪುತ್ತೂರು ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಶಶಿರಾಜ್ ರೈ ಮುಂಡಾಳಗುತ್ತುರವರು ಅಧ್ಯಕ್ಷತೆ ವಹಿಸಿ, ಸ್ವಾಗತಿಸಿದರು.
ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಸಂಚಾಲಕ ದಯಾನಂದ ರೈ ಮನವಳಿಕೆಗುತ್ತು, ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲೊಟ್ಟು, ಮಾಜಿ ಅಧ್ಯಕ್ಷರಾದ ಸಹಕಾರರತ್ನ ಸವಣೂರು ಕೆ.ಸೀತಾರಾಮ ರೈ, ಪುತ್ತೂರು ತಾಲೂಕು ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಸಬಿತಾ ಭಂಡಾರಿ, ಪುತ್ತೂರು ತಾಲೂಕು ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪ್ರಧಾನ ಕಾವ್ಯದರ್ಶಿ ರಂಜಿನಿ ಶೆಟ್ಟಿ, ಜೊತೆ ಕಾವ್ಯದರ್ಶಿ ಯಶುಭ ರೈ, ತಾಲೂಕು ವಿದ್ಯಾರ್ಥಿ ಬಂಟರ ಸಂಘದ ಅಧ್ಯಕ್ಷ ಪವನ್ ಶೆಟ್ಟಿ ಕಂಬಳತಡ್ಡ, ತಾಲೂಕು ಬಂಟರ ಸಂಘ, ಬಂಟರ ಯಾನೆ ನಾಡವರ ಮಾತೃ ಸಂಘ, ಮಹಿಳಾ, ಯುವ ಹಾಗೂ ವಿದ್ಯಾರ್ಥಿ ಬಂಟರ ಸಂಘದ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ತುಳುನಾಡ ಬಂಟೆರೆ ಪರ್ಬ 2023 ಕಾಠ್ಯಕ್ರಮದ ಸಂಚಾಲಕ ಭಾಗ್ಯಶ್ ರೈ ಕೆಯೂರುರವರು ಕಾರ್ಯಕ್ರಮದ ಆಗುಹೋಹುಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು. ತಾಲೂಕು ಯುವ ಬಂಟರ ಸಂಘದ ಕೋಶಾಧಿಕಾರಿ ಕೆ.ಸಿ.ಅಶೋಕ್ ಶೆಟ್ಟಿ ವಂದಿಸಿದರು.
ಉಪಾಧ್ಯಕ್ಷ ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ಯುವ ಬಂಟರ ಸಂಘದ ಸದಸ್ಯತನ ವಿಭಾಗದ ಸಂಯೋಜಕ ಬೊಳಿಂಜಗುತ್ತು ರವಿಪ್ರಸಾದ್ ಶೆಟ್ಟಿ ಬನ್ನೂರುರವರು ಸಹಕರಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಯುವ ಬಂಟರ ಸಂಘದ ಧಾರ್ಮಿಕ ವಿಭಾಗದ ಸಂಯೋಜಕ ಮನ್ಮಥ ಶೆಟ್ಟಿ ಕೊಡಿಪ್ಪಾಡಿ ವಹಿಸಿಕೊಂಡರು.




