ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮ ನಕ್ಸಲ್ ಚಟುವಟಿಕೆಗಳಿಂದ ಸುದ್ದಿಯಾಗಿದ್ದ ಊರು. ಇದೀಗ ಆ ಹಣೆಪಟ್ಟಿ ಕಳಚಿಕೊಂಡಿದ್ದು, ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿಗೆ ಭಾಜನವಾಗಿದೆ. ಈ ಮೂಲಕ ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿಗೆ ಪಾತ್ರವಾದ ಕರ್ನಾಟಕದ ಏಕೈಕ ಗ್ರಾಮವೆಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ದೇಶದ ಗ್ರಾಮಗಳಲ್ಲಿ ಸ್ಪರ್ಧಾತ್ಮಕತೆ ಮತ್ತು ಸ್ವಾವಲಂಬನೆಯ ಒಲವು ಹೆಚ್ಚಿಸುವುದಕ್ಕಾಗಿ ಪ್ರವಾಸೋದ್ಯಮ ಸಚಿವಾಲಯವು ಕಳೆದ ವರ್ಷ ‘ಬೆಸ್ಟ್ ಟೂರಿಸಂ ವಿಲೇಜ್ ಕಾಂಪಿಟೀಷನ್’ ಆರಂಭಿಸಿತ್ತು. ಇದರ ಅಡಿಯಲ್ಲಿ ಪ್ರತಿ ಕೆಟಗರಿಯಿಂದ ಅತ್ಯುತ್ತಮ ಐದು ಗ್ರಾಮೀಣ ಪ್ರವಾಸೋದ್ಯಮ ಗ್ರಾಮಗಳನ್ನು ಗುರುತಿಸಲಾಗುತ್ತದೆ.
ಹಿಂದೊಮ್ಮೆ ನಕ್ಸಲ್ ಚಟುವಟಿಕೆ ಪೀಡಿತ ಪ್ರದೇಶ ಎಂದೇ ಗುರುತಿಸಿಕೊಂಡಿದ್ದ ಕುತ್ಲೂರು ಈಗ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದೆ. ಆದರೆ, ಬೇರೆಯೇ ಕಾರಣಕ್ಕೆ! ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಈ ಗ್ರಾಮಕ್ಕೆ ಈಗ ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಗೆ ಭಾಜನವಾದ ಕರ್ನಾಟಕದ ಏಕೈಕ ಗ್ರಾಮವಾಗಿಯೂ ಕುತ್ಲೂರು ಗುರುತಿಸಿಕೊಂಡಿದೆ.
ಸಾಂಸ್ಕೃತಿಕ ಪರಂಪರೆ ಮತ್ತು ಪ್ರವಾಸೋಧ್ಯಮ ಮೂಲಕ ಸುಸ್ಥಿರ ಅಭಿವೃದ್ಧಿಯನ್ನು ಹೊಂದುತ್ತಿರುವ ಗ್ರಾಮಗಳನ್ನು ಗುರುತಿಸುವ ಸಂಬಂಧ ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯದಿಂದ ಬೆಸ್ಟ್ ಟೂರಿಸಂ ವಿಲೇಜ್ ಕಾಂಪಿಟೇಶನ್ -2024 ಅನ್ನು ಏರ್ಪಡಿಸಲಾಗಿತ್ತು. ಈ ಸ್ಪರ್ಧೆಗೆ ನಾರಾವಿ ಗ್ರಾ.ಪಂ. ವ್ಯಾಪ್ತಿಯ ಕುತ್ಲೂರು ನಿವಾಸಿಗಳಾದ ಹರೀಶ್ ಡಿ. ಸಾಲ್ಯಾನ್ ಹಾಗೂ ಶಿವರಾಜ್ ಮತ್ತು ಸಂದೀಪ್ ಪೂಜಾರಿ ನಾರಾವಿ ಇವರು ಕುತ್ಲೂರು ಗ್ರಾಮದ ಪ್ರವಾಸಿ ತಾಣಗಳು, ಪರಿಸರ ಹಾಗೂ ಪ್ರಕೃತಿಯ ಸೊಬಗಿನ ಬಗ್ಗೆ ಒಂದು ಡಾಕ್ಯುಮೆಂಟರಿ ಮಾಡಿ ಇದನ್ನು ಸ್ಪರ್ಧಾ ನಿಯಮದಂತೆ ಆನ್‌ಲೈನ್‌ನಲ್ಲಿ ಆಪ್‌ಲೋಡ್ ಮಾಡಿದ್ದರು. ಇದರ ಬಗ್ಗೆ ಹಲವು ಸುತ್ತುಗಳಲ್ಲಿ ಪ್ರವಾಸಿ ತಾಣಗಳ ಮಾಹಿತಿಯನ್ನು ಪ್ರವಾಸೋದ್ಯಮ ಮಂತ್ರಾಲಯ ಪಡೆದುಕೊಂಡಿತ್ತು. ದೇಶಾದ್ಯಂತ ನಡೆದ ʼಅತ್ಯುತ್ತಮ ಪ್ರವಾಸಿ ಹಳ್ಳಿಗಳು’ ಸ್ಪರ್ಧೆಯಲ್ಲಿ ಕುತ್ತೂರು ಗ್ರಾಮ ಆಯ್ಕೆಯಾಗಿದೆ.
ಸೆ.27 ರಂದು ದೆಹಲಿಯ ವಿಜ್ಞಾನ ಭವನದಲ್ಲಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಣಾ ಸಮಾರಂಭ ನಡೆಯಲಿದೆ. ಭಾರತದ ಉಪರಾಷ್ಟ್ರಪತಿಗಳಾದ ಜಗದೀಪ್ ಧನ್ಕರ್, ಪ್ರಧಾನಿ ನರೇಂದ್ರ ಮೋದಿ, ಪ್ರವಾಸೋದ್ಯಮ ಇಲಾಖೆಯ ಸಚಿವರು ಸೇರಿದಂತೆ ಅನೇಕ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ.
ಕಾರ್ಯಕ್ರಮದಲ್ಲಿ ಡಾಕ್ಯುಮೆಂಟರಿ ಮಾಡಿದ್ದ ಹರೀಶ್ ಡಿ. ಸಾಲ್ಯಾನ್ ಮತ್ತು ಶಿವರಾಜ್ ಅಂಚನ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…