ಮಂಗಳೂರು: ಪಡೀಲ್‌ನಲ್ಲಿ ನಿರ್ಮಾಣಗೊಂಡಿರುವ ‘ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ’ಯ ಉದ್ಘಾಟನಾ ಸಮಾರಂಭವು ಇಂದು ಸಂಜೆ 4 ಗಂಟೆಗೆ ನಡೆಯಲಿದೆ. ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಆಸ್ಪತ್ರೆಯ ಉದ್ಘಾಟನೆ ನೆರವೇರಿಸಲಿದ್ದಾರೆ. ತಾಯಿ ಮತ್ತು ಮಗುವಿನ ವಿಶೇಷ ಆರೈಕೆ ವಿಭಾಗವನ್ನು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ರುದ್ರಪ್ಪ ಪಾಟೀಲ್, ಉದ್ಘಾಟಿಸುವರು. ಶಾಸಕ ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಚೇಯರ್‌ಮೆನ್ ಡಾ. ಅಬ್ದುಲ್ ಬಶೀರ್ ವಿ.ಕೆ ಮತ್ತು ನಿರ್ದೇಶಕರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸದ ಬ್ರಿಜೇಶ್ ಚೌಟ, ಕಾಸರಗೋಡು ಸಂಸದ ರಾಜಮೋಹನ್ ಉನ್ನಿತ್ತಾನ್, ಹಾಸನ ಸಂಸದ ಶ್ರೇಯಸ್ ಪಾಟೀಲ್, ಹೊಳೆನರಸೀಪುರ ಶಾಸಕ ಎಚ್. ಡಿ ರೇವಣ್ಣ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ , ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ , ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಎಂ ಫಾರೂಕ್ , ಕಾಸರಗೋಡು ಶಾಸಕ ಎನ್.ಎ ನೆಲ್ಲಿಕುನ್ನು, ಕರ್ನಾಟಕ ರಾಜ್ಯ ಅಲೈಡ್ ಹೆಲ್ತ್‌ಕೇರ್ ಕೌನ್ಸಿಲ್ ಚೆಯರ್‌ಮ್ಯಾನ್ ಯು ಟಿ ಇಫ್ತಿಕಾರ್ ಅಲಿ , ಮಾಜಿ ಸಚಿವರಾದ ಬಿ. ರಮಾನಾಥ ರೈ ಮತ್ತು ವಿನಯಕುಮಾರ್ ಸೊರಕೆ ಮಾಜಿ ಕೇಂದ್ರ ಸಚಿವ ಸಿ.ಎಂ ಇಬ್ರಾಹೀಂ , ವಿವಿಧ ಕ್ಷೇತ್ರಗಳ ಗಣ್ಯರು, ಖ್ಯಾತ ವೈದ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಹೆಸರಲ್ಲೇ ಜನಪ್ರಿಯತೆಯನ್ನು ಗಳಿಸಿಕೊಂಡಿರುವ ಜನಪ್ರಿಯ ಆಸ್ಪತ್ರೆ ಹಾಸನದಲ್ಲಿ ಜನರಿಗೆ ಉತ್ತಮ ಗುಣಮಟ್ಟದ ವೈದ್ಯಕೀಯ ಸೇವೆಗಳನ್ನ ನೀಡುತ್ತಾ ಸುಮಾರು 12 ವರ್ಷಗಳಿಂದ ಕಾರ್ಯಾಚರಿಸುತ್ತಿದೆ. ಮಲ್ಟಿ ಸ್ಪೇಷಾಲಿಟಿ ಜನಪ್ರಿಯ ಆಸ್ಪತ್ರೆಯ ಮುಖ್ಯಸ್ಥರಾದ ಅಬ್ದುಲ್ ಬಶೀರ್ ವಿ ಕೆ ಇವರ ಮುಂದಾಳತ್ವದಲ್ಲಿ ಅದೇಷ್ಟೋ ಕಷ್ಟಕರವಾದ ಶಸ್ತ್ರ ಚಿಕಿತ್ಸೆಗಳು ಯಶಸ್ವಿಯಾದ ಉದಾಹರಣೆಗಳಿವೆ. ಈಗಾಗಲೇ ಜನಪ್ರಿಯ ಎಂಬ ಹೆಸರಿನಲ್ಲಿ ಪ್ರೈವೇಟ್ ಸ್ಕೂಲ್, ಆಡಿಟೋರಿಯಂಗಳನ್ನು ನಡೆಸುತ್ತಿರುವ ಇವ್ರು ಆಸ್ಪತ್ರೆಯನ್ನು ಕೂಡ ಮುನ್ನೆಡೆಸಿಕೊಂಡು ಹೋಗ್ತಾಯಿದ್ದಾರೆ. ಅಬ್ದುಲ್ ಬಶೀರ್ ಅವರು ತಮ್ಮ ಹುಟ್ಟೂರಿನಲ್ಲಿ ಆಸ್ಪತ್ರೆಯನ್ನು ಆರಂಭಿಸಬೇಕು ಎಂಬ ಕನಸ್ಸನ್ನ ಹೊತ್ತಿದ್ರಂತೆ. ಅದರಂತೆ ಜನಪ್ರಿಯ ಆಸ್ಪತ್ರೆಯ ಎರಡನೇ ಶಾಖೆ ಸೆ.29ರಂದು ಅಂದ್ರೆ ಇಂದು ಮಂಗಳೂರಿನ ಪಡೀಲ್‌ನಲ್ಲಿ ಲೋಕಾರ್ಪಣೆಗೊಳ್ಳಲಿದೆ.




