ಇತರೆ

ಇಂದು ಮಂಗಳೂರಿನ ಪಡೀಲ್‌ನಲ್ಲಿ ಲೋಕಾರ್ಪಣೆಗೊಳ್ಳಲಿದೆ ಹೆಸರಲ್ಲೇ ಜನಪ್ರಿಯತೆಯನ್ನು ಗಳಿಸಿಕೊಂಡಿರುವ ‘ಜನಪ್ರಿಯ ಆಸ್ಪತ್ರೆ’

ಮಂಗಳೂರು: ಪಡೀಲ್‌ನಲ್ಲಿ ನಿರ್ಮಾಣಗೊಂಡಿರುವ ‘ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ’ಯ ಉದ್ಘಾಟನಾ ಸಮಾರಂಭವು ಇಂದು ಸಂಜೆ 4 ಗಂಟೆಗೆ ನಡೆಯಲಿದೆ. ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಆಸ್ಪತ್ರೆಯ ಉದ್ಘಾಟನೆ ನೆರವೇರಿಸಲಿದ್ದಾರೆ. ತಾಯಿ ಮತ್ತು ಮಗುವಿನ ವಿಶೇಷ ಆರೈಕೆ ವಿಭಾಗವನ್ನು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್‌ ಪ್ರಕಾಶ್ ರುದ್ರಪ್ಪ ಪಾಟೀಲ್, ಉದ್ಘಾಟಿಸುವರು. ಶಾಸಕ ವೇದವ್ಯಾಸ್‌ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಚೇಯರ್‌ಮೆನ್ ಡಾ. ಅಬ್ದುಲ್ ಬಶೀರ್ ವಿ.ಕೆ ಮತ್ತು ನಿರ್ದೇಶಕರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸದ ಬ್ರಿಜೇಶ್ ಚೌಟ, ಕಾಸರಗೋಡು ಸಂಸದ ರಾಜಮೋಹನ್‌ ಉನ್ನಿತ್ತಾನ್, ಹಾಸನ ಸಂಸದ ಶ್ರೇಯಸ್ ಪಾಟೀಲ್, ಹೊಳೆನರಸೀಪುರ ಶಾಸಕ ಎಚ್. ಡಿ ರೇವಣ್ಣ, ಪುತ್ತೂರು ಶಾಸಕ ಅಶೋಕ್ ಕುಮಾರ್‌ ರೈ , ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ , ವಿಧಾನ ಪರಿಷತ್ ಸದಸ್ಯ ಐವನ್‌ ಡಿಸೋಜ, ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಎಂ ಫಾರೂಕ್ , ಕಾಸರಗೋಡು ಶಾಸಕ ಎನ್.ಎ ನೆಲ್ಲಿಕುನ್ನು, ಕರ್ನಾಟಕ ರಾಜ್ಯ ಅಲೈಡ್ ಹೆಲ್ತ್‌ಕೇರ್ ಕೌನ್ಸಿಲ್ ಚೆಯರ್‌ಮ್ಯಾನ್ ಯು ಟಿ ಇಫ್ತಿಕಾರ್ ಅಲಿ , ಮಾಜಿ ಸಚಿವರಾದ ಬಿ. ರಮಾನಾಥ ರೈ ಮತ್ತು ವಿನಯಕುಮಾರ್ ಸೊರಕೆ ಮಾಜಿ ಕೇಂದ್ರ ಸಚಿವ ಸಿ.ಎಂ ಇಬ್ರಾಹೀಂ , ವಿವಿಧ ಕ್ಷೇತ್ರಗಳ ಗಣ್ಯರು, ಖ್ಯಾತ ವೈದ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಹೆಸರಲ್ಲೇ ಜನಪ್ರಿಯತೆಯನ್ನು ಗಳಿಸಿಕೊಂಡಿರುವ ಜನಪ್ರಿಯ ಆಸ್ಪತ್ರೆ ಹಾಸನದಲ್ಲಿ ಜನರಿಗೆ ಉತ್ತಮ ಗುಣಮಟ್ಟದ ವೈದ್ಯಕೀಯ ಸೇವೆಗಳನ್ನ ನೀಡುತ್ತಾ ಸುಮಾರು 12 ವರ್ಷಗಳಿಂದ ಕಾರ್ಯಾಚರಿಸುತ್ತಿದೆ. ಮಲ್ಟಿ ಸ್ಪೇಷಾಲಿಟಿ ಜನಪ್ರಿಯ ಆಸ್ಪತ್ರೆಯ ಮುಖ್ಯಸ್ಥರಾದ ಅಬ್ದುಲ್ ಬಶೀರ್ ವಿ ಕೆ ಇವರ ಮುಂದಾಳತ್ವದಲ್ಲಿ ಅದೇಷ್ಟೋ ಕಷ್ಟಕರವಾದ ಶಸ್ತ್ರ ಚಿಕಿತ್ಸೆಗಳು ಯಶಸ್ವಿಯಾದ ಉದಾಹರಣೆಗಳಿವೆ. ಈಗಾಗಲೇ ಜನಪ್ರಿಯ ಎಂಬ ಹೆಸರಿನಲ್ಲಿ ಪ್ರೈವೇಟ್ ಸ್ಕೂಲ್, ಆಡಿಟೋರಿಯಂಗಳನ್ನು ನಡೆಸುತ್ತಿರುವ ಇವ್ರು ಆಸ್ಪತ್ರೆಯನ್ನು ಕೂಡ ಮುನ್ನೆಡೆಸಿಕೊಂಡು ಹೋಗ್ತಾಯಿದ್ದಾರೆ. ಅಬ್ದುಲ್ ಬಶೀರ್ ಅವರು ತಮ್ಮ ಹುಟ್ಟೂರಿನಲ್ಲಿ ಆಸ್ಪತ್ರೆಯನ್ನು ಆರಂಭಿಸಬೇಕು ಎಂಬ ಕನಸ್ಸನ್ನ ಹೊತ್ತಿದ್ರಂತೆ. ಅದರಂತೆ ಜನಪ್ರಿಯ ಆಸ್ಪತ್ರೆಯ ಎರಡನೇ ಶಾಖೆ ಸೆ.29ರಂದು ಅಂದ್ರೆ ಇಂದು ಮಂಗಳೂರಿನ ಪಡೀಲ್‌ನಲ್ಲಿ ಲೋಕಾರ್ಪಣೆಗೊಳ್ಳಲಿದೆ.

 

 

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…

3 days ago

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…

3 days ago

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…

4 days ago

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…

4 days ago

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…

4 days ago

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…

4 days ago