ದಕ್ಷಿಣ ಕನ್ನಡ :ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು, ವಿಜಯ ಗ್ರಾಮಾಭಿವೃದ್ಧಿ ಪ್ರತಿಷ್ಠಾನ (ರಿ ), ಮಂಗಳೂರು, ವಿಜಯ ಗ್ರಾಮಾಭಿವೃದ್ಧಿ ಸಮಿತಿ, ಹೊಸಂಗಡಿ, ಫ್ರೆಂಡ್ಸ್ ಕ್ಲಬ್ (ರಿ ) ಹೊಸಂಗಡಿ ಇವರ ಸಹಭಾಗಿತ್ವದಲ್ಲಿ, ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ ಫ್ರೆಂಡ್ಸ್ ಕ್ಲಬ್ ಸಭಾಭವನ, ಹೊಸಂಗಡಿಯಲ್ಲಿ ನಡೆಯಿತು.
ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಬಗ್ಗೆ ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣಾ ವಿಜ್ಞಾನಿ ಡಾ.ಕೇದಾರನಾಥ ಮತ್ತು ತೋಟಗಾರಿಕಾ ವಿಜ್ಞಾನಿ ಡಾ. ರಶ್ಮಿ ಇವರು ರೈತರಿಗೆ ಸಮಗ್ರ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಜಯ ಗ್ರಾಮದ ಸಮಿತಿ, ಹೊಸಂಗಡಿ ಗ್ರಾಮ ಇದರ ಅಧ್ಯಕ್ಷರು ಮತ್ತು ಕಾರ್ಯಕ್ರಮ ಸಂಯೋಜಕರಾದ ಶ್ರೀ ಹರಿಪ್ರಸಾದ್. ಪಿ. ವಹಿಸಿ, ಪ್ರಸ್ತಾವನೆ ಯೊಂದಿಗೆ ಸ್ವಾಗತ ಮತ್ತು ಧನ್ಯವಾದವಿತ್ತರು.
ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆಯ ಮುಂಚೂಣಿ ಪ್ರಾತ್ಯಕ್ಷಿಕೆ 2024 – 25 ಸಾಲಿನಲ್ಲಿ ಸುಮಾರು 10 ರೈತರನ್ನು ಆಯ್ಕೆ ಮಾಡಿ ಅವರಿಗೆ ಅಡಿಕೆ ಎಲೆ ಚುಕ್ಕಿ ರೋಗದ ನಿರ್ವಹಣೆಗಾಗಿ ಪರಿಕರಗಳನ್ನು ನೀಡಲಾಯಿತು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…