ಜನ ಮನದ ನಾಡಿ ಮಿಡಿತ

Advertisement

ಮುಡಾ ಹಗರಣ ಕೇಸ್: ಸಿದ್ದರಾಮಯ್ಯಗೆ ಶುರುವಾಯ್ತು ಇಡಿ ಸಂಕಷ್ಟ!

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್​ಐಆರ್​ ದಾಖಲಾಗಿದ್ದು, ಇದರ ಬೆನ್ನಲ್ಲೇ ಸಿಎಂ ರಾಜೀನಾಮೆಗೆ ಒತ್ತಡ ಹೆಚ್ಚಾಗಿದೆ. ಇದರ ಮಧ್ಯ ಇದೀಗ ಸಿದ್ದರಾಮಯ್ಯಗೆ ಜಾರಿ ನಿರ್ದೇಶನಾಲಯ (ಇಡಿ) ಸಂಕಷ್ಟ ಎದುರಾಗಿದೆ.

 ಇಂದು (ಸೆಪ್ಟೆಂಬರ್ 30) ಬೆಂಗಳೂರಿನ ಇಡಿ ಕಚೇರಿಯಲ್ಲಿ ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದು, ಈ ದೂರಿನ ಮೇರೆಗೆ ಸಿಎಂ ವಿರುದ್ಧ ಯಾವುದೇ ಸಂದರ್ಭದಲ್ಲಿ ಎಫ್​ಐಆರ್​ ದಾಖಲಾಗುವ ಸಾಧ್ಯತೆ ಇದೆ. ಒಂದು ವೇಳೆ ಇಡಿಯಲ್ಲೂ ಎಫ್​ಐಆರ್ ದಾಖಲಾದರೆ, ಸಿದ್ದರಾಮಯ್ಯಗೆ ಡಬಲ್​ ಸಂಕಷ್ಟ ಎದುರಾದಂತಾಗುತ್ತದೆ.

ಮುಡಾ ಕೇಸ್ ದೂರುದಾರ ಸ್ನೇಹಮಯಿ ಕೃಷ್ಣ ಅವರು ಇಂದು ತಮ್ಮವರ ಮೂಲಕ ಇಡಿ ಕಚೇರಿಗೆ ದೂರು ತಲುಪಿಸಿದ್ದು, ಇದೀಗ ಇಡಿ ಅಧಿಕಾರಿಗಳು ದೂರು ದಾಖಲಿಸಿಕೊಂಡು ಸ್ವೀಕೃತಿ ಪತ್ರ ಸಹ ನೀಡಿದ್ದಾರೆ. ಹೀಗಾಗಿ ಯಾವುದೇ ಸಮಯದಲ್ಲೂ ಸಹ ಸಿಎಂ ವಿರುದ್ಧ ಇಡಿ ಅಧಿಕಾರಿಗಳು ಎಫ್​ಐಆರ್ ದಾಖಲಿಸಲಿದ್ದಾರೆ.

ಲೋಕಾಯುಕ್ತ ತನಿಖೆ ಜೊತೆಗೆ ಸಿಎಂ ಸಿದ್ದರಾಮಯ್ಯ ಜೊತೆಗೆ ಡಬಲ್ ಟೆನ್ಷನ್ ಶುರುವಾಗಿದೆ. ಒಂದ್ಕಡೆ ಸಿಬಿಐ ತನಿಖೆಗೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಮೊರೆ ಹೋಗಿದ್ದಾರೆ. ಲೋಕಾಯುಕ್ತ ರಾಜ್ಯ ಸರ್ಕಾರದ ಅಧೀನದಲ್ಲಿ ನಡೆಯುವ ಸಂಸ್ಥೆಯಾಗಿದೆ. ಹೀಗಾಗಿ ಪಾರದರ್ಶಕ ತನಿಖೆಯಾಗ್ಬೇಕು ಅಂದ್ರೆ ಸಿಬಿಐಗೆ ಕೊಡಿ ಎಂದು ಮನವಿ ಮಾಡಿದ್ದಾರೆ. ಈ ಸಂಬಂಧ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದು, ದಸರಾ ರಜೆ ಬಳಿಕ ಈ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆಗಳಿವೆ. ಮತ್ತೊಂದಡೆ ಇದೀಗ ಇಡಿ ಅಧಿಕಾರಿಗಳಿಗೂ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!