ಕೈಕಂಬ: ದ್ವಿಚಕ್ರ ವಾಹನದ ಸೀಟಿನ ಕೆಳಗಡೆ ನುಸುಳಿ ಕೂತಿದ್ದ ಕನ್ನಡಿ ಹಾವು ವಾಹನ ಸವಾರನಿಗೆ ಕಚ್ಚಿದ ಘಟನೆ ಕುಪ್ಪೆಪದವಿನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಸವಾರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕುಪ್ಪೆಪದವಿನನಲ್ಲಿ ಸೈಬರ್ ಸೆಂಟರ್ ನಡೆಸುತ್ತಿರುವ ಇಮ್ತಿಯಾಜ್ ಅವರು ಹಾವು ಕಡಿತಕ್ಕೆ ಒಳಗಾದವರು. ಅವರು ಸೆ. 27ರಂದು ರಾತ್ರಿ ಕೆಲಸ ಮುಗಿಸಿ ಮಸೀದಿಗೆ ಹೋಗಿ ಅಲ್ಲಿಂದ ಮನೆಗೆ ತೆರಳಲು ತನ್ನ ಎಲೆಕ್ಟ್ರಿಕ್ ಸ್ಕೂಟರ್ ಬಳಿ ಬಂದು ಸ್ಕೂಟರ್‌ನ ಸೀಟ್ ತೆರೆದು ಕಾಗದ ಪತ್ರಗಳನ್ನು ಇಡುವ ಸಂದರ್ಭದಲ್ಲಿ ಸೀಟಿನ ಕೆಳಗಡೆಯಿದ್ದ ಹಾವು ಬೆರಳಿಗೆ ಕಚ್ಚಿತ್ತು. ಇಮ್ತಿಯಾಜ್ ಅವರನ್ನು ತತ್‌ಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…