ಬಂಟ್ವಾಳ: ಕೋಟ ಶ್ರೀನಿವಾಸ ಪೂಜಾರಿ ಅವರ ತೆರವಾದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಭಂಡಾರಿ ಬೊಟ್ಟಿಯಾಡಿ ಅವರನ್ನು ಘೋಷಣೆ ಮಾಡಲಾಗಿದೆ.
ಯುವಮೋರ್ಚಾ ಜಿಲ್ಲಾಧ್ಯಕ್ಷನಾಗಿ ಮಿಂಚಿದ ಇವರು ಪರಿವಾರ ಸಂಘಟನೆಯಲ್ಲಿ ಮುಂಚೂಣಿಯ ನಾಯಕನಾಗಿ ಸೇವೆ ಸಲ್ಲಿಸಿದ್ದಾರೆ.ಅತೀ ಕಡಿಮೆ ಜನಸಂಖ್ಯೆ ಇರುವ ಭಂಡಾರಿ ಸಮುದಾಯವನ್ನು ಗುರುತಿಸಿ ಈ ಬಾರಿ ಬಿಜೆಪಿ ಟಿಕೆಟ್ ನೀಡುವ ಮೂಲಕ ಕೆಲ ಸಮುದಾಯಕ್ಕೆ ಮನ್ನಣೆ ನೀಡಿರುವ ಬಿಜೆಪಿ ನಡೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಪ್ರಸ್ತುತ ದಿನಗಳಲ್ಲಿ ರಾಜಕೀಯ ಪಕ್ಷಗಳು ಅಭ್ಯರ್ಥಿಯ ಆಯ್ಕೆಯ ಸಂದರ್ಭದಲ್ಲಿ ಜಾತಿಗಳನ್ನು ನೋಡಿಕೊಂಡು ದೊಡ್ಡ ಸಮುದಾಯಗಳಿಗೆ ಮಣೆ ಹಾಕುತ್ತಿದೆಎಂಬ ಆರೋಪ ಕೇಳಿ ಬರುತ್ತಿತ್ತು.ಆದರೆ ಪ್ರಸ್ತುತ ಬಿಜೆಪಿ ಯ ಈ ಅಚ್ಚರಿ ಯ ಆಯ್ಕೆಯಿಂದ ಅಂತಹದೊಂದು ಆರೋಪಕ್ಕೆ ತಕ್ಕ ಉತ್ತರ ನೀಡಿದಂತಾಗಿದೆ.
ಈ ಬಾರಿ ಎಂ.ಎಲ್.ಸಿ.ಚುನಾವಣೆಗೆ ಪ್ರಬಲ ಸಮುದಾಯಗಳಾದ ಬಂಟ ಸಮಾಜದ ನಳಿನ್ ಕುಮಾರ್ ಕಟೀಲು ಹಾಗೂ ಮೊಗವೀರ ಸಮಾಜದ ಪ್ರಮೋದ್ ಮದ್ವರಾಜ್ , ಬಿಲ್ಲವ ಸಮುದಾಯದ ಸತೀಶ್ ಸುವರ್ಣ ಹಾಗೂ ಗೀತಾಂಜಲಿ ಸುವರ್ಣ ಅವರ ಹೆಸರುಗಳು ಕೇಳಿ ಬಂದಿತ್ತು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…