ಜನ ಮನದ ನಾಡಿ ಮಿಡಿತ

Advertisement

ಹಣೆಗೆ ಬಿಂದಿ ಧರಿಸಿದ್ದಕ್ಕೆ ಶಿಕ್ಷಕನಿಂದ ಕಪಾಳಮೋಕ್ಷ; ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಜಾರ್ಖಂಡ್: ಭಾರತೀಯ ಸಂಸ್ಕೃತಿಯಲ್ಲಿ ಬಿಂದಿಗೆ ಮಹತ್ವದ ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕ ಮೌಲ್ಯವಿದೆ. ಆದರೆ ‘ಬಿಂದಿ’ ಇಟ್ಟುಕೊಂಡು ಶಾಲೆಗೆ ಬಂದಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಕ ಥಳಿಸಿದ್ದಾನೆ. ಇದರಿಂದಾಗಿ ಮನನೊಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಾರ್ಖಂಡ್‌ನ ಧನ್‌ಬಾದ್‌ನಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಕುರಿತು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್‌ಸಿಪಿಸಿಆರ್) ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಅವರು ಮಂಗಳವಾರ ಟ್ವೀಟ್‌ ಮಾಡಿದ್ದು, ವಿದ್ಯಾರ್ಥಿನಿಯೊಬ್ಬಳು ‘ಬಿಂದಿ’ ಧರಿಸಿ ಶಾಲೆಗೆ ಹೋಗಿದ್ದಕ್ಕಾಗಿ ಶಿಕ್ಷಕ ಕಪಾಳಮೋಕ್ಷ ಮಾಡಿದ್ದಾರೆ. ಶಿಕ್ಷಕನ ವರ್ತನೆಯಿಂದ ಮನನೊಂದ 10ನೇ ತರಗತಿ ವಿದ್ಯಾರ್ಥಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ. ಈ ವಿಷಯವನ್ನು ಎನ್‌ಸಿಪಿಸಿಆರ್ ಗಂಭೀರವಾಗಿ ತೆಗೆದುಕೊಂಡಿದೆ. ತನಿಖೆಗಾಗಿ ನಮ್ಮ ತಂಡ ಧನ್‌ಬಾದ್‌ಗೆ ತೆರಳಿದೆ ಎಂದು ತಿಳಿಸಿದ್ದಾರೆ.

ಮಂಗಳವಾರ ಮೃತ ಬಾಲಕಿಯ ಪೋಷಕರು ಹಾಗೂ ಸ್ಥಳೀಯರು ಶಾಲಾ ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದ್ದು, ಪೊಲೀಸರು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ವಿದ್ಯಾರ್ಥಿನಿ ಆತ್ಮಹತ್ಯೆ ಪತ್ರವನ್ನು ತನ್ನ ಸಮವಸ್ತ್ರದಲ್ಲಿ ಇಟ್ಟುಕೊಂಡಿದ್ದು ಪೊಲೀಸರಿಗೆ ದೊರೆತಿದೆ. ಘಟನೆ ಬೆಳಕಿಗೆ ಬಂದ ನಂತರ ಶಾಲೆಯ ಪ್ರಾಂಶುಪಾಲ ಹಾಗೂ ಶಿಕ್ಷಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಜಾರ್ಖಂಡ್‌ನ ಧನ್‌ಬಾದ್‌ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಅಧ್ಯಕ್ಷ ಉತ್ತಮ್ ಮುಖರ್ಜಿ ಮಾಹಿತಿ ನೀಡಿದರು. ಧನ್‌ಬಾದ್‌ನ ಟೆತುಲ್ಮರಿ ಪ್ರದೇಶದಲ್ಲಿ ಸೋಮವಾರ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!