ಜಾರ್ಖಂಡ್: ಭಾರತೀಯ ಸಂಸ್ಕೃತಿಯಲ್ಲಿ ಬಿಂದಿಗೆ ಮಹತ್ವದ ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕ ಮೌಲ್ಯವಿದೆ. ಆದರೆ ‘ಬಿಂದಿ’ ಇಟ್ಟುಕೊಂಡು ಶಾಲೆಗೆ ಬಂದಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಕ ಥಳಿಸಿದ್ದಾನೆ. ಇದರಿಂದಾಗಿ ಮನನೊಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಾರ್ಖಂಡ್‌ನ ಧನ್‌ಬಾದ್‌ನಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಕುರಿತು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್‌ಸಿಪಿಸಿಆರ್) ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಅವರು ಮಂಗಳವಾರ ಟ್ವೀಟ್ ಮಾಡಿದ್ದು, ವಿದ್ಯಾರ್ಥಿನಿಯೊಬ್ಬಳು ‘ಬಿಂದಿ’ ಧರಿಸಿ ಶಾಲೆಗೆ ಹೋಗಿದ್ದಕ್ಕಾಗಿ ಶಿಕ್ಷಕ ಕಪಾಳಮೋಕ್ಷ ಮಾಡಿದ್ದಾರೆ. ಶಿಕ್ಷಕನ ವರ್ತನೆಯಿಂದ ಮನನೊಂದ 10ನೇ ತರಗತಿ ವಿದ್ಯಾರ್ಥಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ. ಈ ವಿಷಯವನ್ನು ಎನ್‌ಸಿಪಿಸಿಆರ್ ಗಂಭೀರವಾಗಿ ತೆಗೆದುಕೊಂಡಿದೆ. ತನಿಖೆಗಾಗಿ ನಮ್ಮ ತಂಡ ಧನ್‌ಬಾದ್‌ಗೆ ತೆರಳಿದೆ ಎಂದು ತಿಳಿಸಿದ್ದಾರೆ.
ಮಂಗಳವಾರ ಮೃತ ಬಾಲಕಿಯ ಪೋಷಕರು ಹಾಗೂ ಸ್ಥಳೀಯರು ಶಾಲಾ ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದ್ದು, ಪೊಲೀಸರು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ವಿದ್ಯಾರ್ಥಿನಿ ಆತ್ಮಹತ್ಯೆ ಪತ್ರವನ್ನು ತನ್ನ ಸಮವಸ್ತ್ರದಲ್ಲಿ ಇಟ್ಟುಕೊಂಡಿದ್ದು ಪೊಲೀಸರಿಗೆ ದೊರೆತಿದೆ. ಘಟನೆ ಬೆಳಕಿಗೆ ಬಂದ ನಂತರ ಶಾಲೆಯ ಪ್ರಾಂಶುಪಾಲ ಹಾಗೂ ಶಿಕ್ಷಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಜಾರ್ಖಂಡ್‌ನ ಧನ್‌ಬಾದ್ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಅಧ್ಯಕ್ಷ ಉತ್ತಮ್ ಮುಖರ್ಜಿ ಮಾಹಿತಿ ನೀಡಿದರು. ಧನ್‌ಬಾದ್‌ನ ಟೆತುಲ್ಮರಿ ಪ್ರದೇಶದಲ್ಲಿ ಸೋಮವಾರ ಈ ಘಟನೆ ನಡೆದಿದೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…