ದಕ್ಷಿಣ ಭಾರತದ ಕ್ರಾಂತಿಕಾರಿ ದೇವಸ್ಥಾನ ಎಂದೇ ಪ್ರಸಿದ್ದಿ ಪಡೆದಿರುವ ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ನವದುರ್ಗೆಯರ ಪ್ರತಿಷ್ಠೆ ಹಾಗೂ ಗಣಪನನ್ನು ಪ್ರತಿಷ್ಠಾಪಿಸಿ ಗುರು ಪ್ರಾರ್ಥನೆಯೊಂದಿಗೆ ಮಂಗಳೂರು ದಸರಾಕ್ಕೆ ಚಾಲನೆ ಸಿಕ್ಕಿದೆ.

ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ದಸರಾಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದ್ದು, ದೇವಸ್ಥಾನ ಆಡಳಿತ ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್, ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ರು. ಇನ್ನು ಬಿ.ಆರ್.ಕರ್ಕೇರ ಅವರು ಈ ದಸರಾಕ್ಕೆ ಮೊದಲು ಚಾಲನೆ ನೀಡಿದವರು. ಅಂದಿನಿ0ದ ಇಂದಿನವರೆಗೂ ಪ್ರತಿವರ್ಷ ಮಂಗಳೂರು ದಸರಾವನ್ನು ವಿಜೃಂಭಣೆಯಿAದ ಆಚರಿಸಲಾಗುತ್ತಿದೆ. ಆರಾಧನೆಯ ಜೊತೆಗೆ ದಸರಾದ ಪ್ರಮುಖ ಆಕರ್ಷಣೆಯಾಗಿ ಮಂಗಳೂರು ನಗರ ವಿದ್ಯುತ್ ದೀಪಾಲಂಕಾರಗಳಿAದ ಮದುವಣಗಿತ್ತಿಯಂತೆ ಸಿಂಗಾರಗೊAಡಿದೆ .ವರ್ಷದಿಂದ ವರ್ಷಕ್ಕೆ ಪ್ರಸಿದ್ಧಿ ಪಡೆಯುತ್ತಿರುವ ಮಂಗಳೂರು ದಸರಾಕ್ಕೆ ರಾಜ್ಯ, ದೇಶ ಮಾತ್ರವಲ್ಲದೆ ವಿದೇಶಗಳಿಂದಲೂ ಲಕ್ಷಾಂತರ ಜನರು ಆಗಮಿಸುತ್ತಾರೆ. ನವರಾತ್ರಿಯಲ್ಲಿ ಭಕ್ತರ ದಂಡೇ ಈ ಕ್ಷೇತ್ರಕ್ಕೆ ಹರಿದು ಬರುತ್ತದೆ. ಪ್ರತಿವರ್ಷದಂತೆ ಈ ವರ್ಷವೂ ಮಂಗಳೂರು ದಸರಾ ಕಣ್ತುಂಬಿಕೊಳ್ಳಲು ಜನರು ಕಾತುರರಾಗಿದ್ದಾರೆ.



