ಜನ ಮನದ ನಾಡಿ ಮಿಡಿತ

Advertisement

ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಸಾವು..!

ಬಂಟ್ವಾಳ : ದ್ವಿಚಕ್ರಗಳೆರಡರ ಮಧ್ಯೆ ಮೆಲ್ಕಾರ್ ಮುಡಿಪು ರಾಜ್ಯ ಹೆದ್ದಾರಿಯ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ‌ಆ. 2 ರಂದು ಬುಧವಾರ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ‌ಘಟನೆ ಇಂದು ನಡೆದಿದೆ.

 


ಬರಿಮಾರು ನಿವಾಸಿ ಸರ್ಪಾಝ್ ( 33) ಮೃತಪಟ್ಟ ವ್ಯಕ್ತಿಯಾಗಿದ್ದು, ಸಹಸವಾರಿಣಿ ವಿದ್ಯಾರ್ಥಿ ಜಾಸ್ಮೀನ್ ( 18) ಗಾಯಳು ಆಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಸರ್ಪಾಝ್ ಅವರು ತಂಗಿಯನ್ನು ದೇರಳಕಟ್ಟೆ ಕಾಲೇಜಿಗೆ ಸ್ಕೂಟರ್ ನಲ್ಲಿ ಕರೆದುಕೊಂಡು ಹೋಗುವ ವೇಳೆ ಮೆಲ್ಕಾರ್ ನಿಂದ ಮುಡಿಪು ಮಾರ್ಗವಾಗಿ ಮಾರ್ನಬೈಲು ತಲುಪಿದಾಗ ಎದುರಿನಿಂದ ಅಜಾಗರೂಕತೆಯಿಂದ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ಇಂಮ್ತಿಯಾಜ್ ಎಂಬಾತ ಇವರ ವಾಹನಕ್ಕೆಡಿಕ್ಕಿ ಹೊಡೆದಿದ್ದಾನೆ.ಡಿಕ್ಕಿ ರಭಸಕ್ಕೆ ಸ್ಕೂಟರ್ ಸವಾರ ಹಾಗೂ ಸಹಸವಾರಿಣಿ ಅಣ್ಣ ತಂಗಿ ಇಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ‌ಗಾಯವಾಗಿತ್ತು.ಕೂಡಲೇ ಇಬ್ಬರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಗಂಭೀರವಾಗಿ ಏಟಾಗಿದ್ದ ಸರ್ಪಾಝ್ ಮಾತ್ರ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದು ಪೋಲೀಸ್ ‌ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!