ಬಂಟ್ವಾಳ : ದ್ವಿಚಕ್ರಗಳೆರಡರ ಮಧ್ಯೆ ಮೆಲ್ಕಾರ್ ಮುಡಿಪು ರಾಜ್ಯ ಹೆದ್ದಾರಿಯ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಆ. 2 ರಂದು ಬುಧವಾರ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ.
ಬರಿಮಾರು ನಿವಾಸಿ ಸರ್ಪಾಝ್ ( 33) ಮೃತಪಟ್ಟ ವ್ಯಕ್ತಿಯಾಗಿದ್ದು, ಸಹಸವಾರಿಣಿ ವಿದ್ಯಾರ್ಥಿ ಜಾಸ್ಮೀನ್ ( 18) ಗಾಯಳು ಆಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಸರ್ಪಾಝ್ ಅವರು ತಂಗಿಯನ್ನು ದೇರಳಕಟ್ಟೆ ಕಾಲೇಜಿಗೆ ಸ್ಕೂಟರ್ ನಲ್ಲಿ ಕರೆದುಕೊಂಡು ಹೋಗುವ ವೇಳೆ ಮೆಲ್ಕಾರ್ ನಿಂದ ಮುಡಿಪು ಮಾರ್ಗವಾಗಿ ಮಾರ್ನಬೈಲು ತಲುಪಿದಾಗ ಎದುರಿನಿಂದ ಅಜಾಗರೂಕತೆಯಿಂದ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ಇಂಮ್ತಿಯಾಜ್ ಎಂಬಾತ ಇವರ ವಾಹನಕ್ಕೆಡಿಕ್ಕಿ ಹೊಡೆದಿದ್ದಾನೆ.ಡಿಕ್ಕಿ ರಭಸಕ್ಕೆ ಸ್ಕೂಟರ್ ಸವಾರ ಹಾಗೂ ಸಹಸವಾರಿಣಿ ಅಣ್ಣ ತಂಗಿ ಇಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯವಾಗಿತ್ತು.ಕೂಡಲೇ ಇಬ್ಬರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಗಂಭೀರವಾಗಿ ಏಟಾಗಿದ್ದ ಸರ್ಪಾಝ್ ಮಾತ್ರ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದು ಪೋಲೀಸ್ ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…