ಶ್ರೀ ಮಂಗಳಾದೇವಿ ದೇವಸ್ಥಾನದ ಸೇವೆಯನ್ನೇ ಮೂಲ ಧ್ಯೆಯವನ್ನಾಗಿಸಿಕೊಂಡು ಸ್ಥಾಪನೆಯಾದಂತಹ ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ನವರಾತ್ರಿಯ ಆರಂಭದ ದಿನವಾದ ಕ್ಷೇತ್ರದ ತಂತ್ರಿಗಳಾದ ನೀಲೇಶ್ವರ ಶ್ರೀ ಪದ್ಮನಾಭ ತಂತ್ರಿಯವರ ಸಮ್ಮುಖದಲ್ಲಿ ರಜತ ಹಸ್ತಗಳನ್ನು ಸಮರ್ಪಿಸಲಾಯಿತು.
ಶ್ರೀಮಂಗಳಾದೇವಿ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿಯೂ ತನ್ನನ್ನು ತಾನು ತೊಡಗಿಸಿಕೊಂಡಿರುವಂತಹ ಶ್ರೀಮಂಗಳಾದೇವಿ ಸೇವಾ ಸಮಿತಿಯು ಕ್ಷೇತ್ರದಲ್ಲಿ ನಡೆಯುವ ನವರಾತ್ರಿ ಮಹೋತ್ಸವ ಜಾತ್ರಾ ಮಹೋತ್ಸವ ಸೇರಿದಂತೆ ಎಲ್ಲಾ ಅನ್ನ-ಸಂತರ್ಪಣೆಯ ದಿವಸಗಳಂದು ಮಾತ್ರವಲ್ಲದೆ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿ ಆತ್ಮೀಯವಾಗಿ ತೊಡಗಿಸಿಕೊಂಡಿರುತ್ತದ್ದೆ. ಮಾತ್ರವಲ್ಲದೆ ಸಂದರ್ಭನುಸಾರವಾಗಿ ಶ್ರೀ ಕ್ಷೇತ್ರದ ಅನುಕೂಲಕ್ಕೆ ಅನುಗುಣವಾಗಿ ಸದಾಕಾಲ ತಮ್ಮಿಂದ ಆಗುವ ಸೇವೆಯಲ್ಲಿ ಪಾಲ್ಗೊಂಡಿರುತ್ತದೆ.
ಸಮಿತಿಯ ಅಧ್ಯಕ್ಷರಾದ ದಿಲ್ ರಾಜ್ ಆಳ್ವ ಮಾತನಾಡಿ ನಮ್ಮ ಸಮಿತಿಯು ಅನೇಕ ವರ್ಷಗಳಿಂದ ತಾಯಿಯ ಸೇವೆಯಲ್ಲಿ ಪಾಲ್ಗೊಂಡಿದೆ. ಈ ವರ್ಷ ವಿಷೇಷವಾಗಿ ರಜತ ಹಸ್ತ ಸಮರ್ಪಣೆ ಮಾತ್ರವಲ್ಲದೆ ವಿಜಯ ದಶಮಿಯಂದು ಸಮಿತಿಯ ವತಿಯಿಂದ ಸಾರ್ವಜನಿಕ ಅನ್ನ ಸಂತರ್ಪಣೆ ನೆರವೇರಲಿದೆ ಎಂದು ತಿಳಿಸಿದರು. ಹಿರಿಯ ಸದಸ್ಯರಾದ ಎ. ಸೀತಾರಾಮ, ಬಿ. ಅಶೋಕ್ ಕುಮಾರ್, ಕೇಶವ , ತುಕಾರಾಮ್, ಪ್ರಧಾನ ಕಾರ್ಯದರ್ಶಿ ತಿಲಕ್ ರಾಜ್ ಕೋಶಾಧಿಕಾರಿ ವಿಶ್ವನಾಥ್, ದೇವಸ್ತಾನದ ಆಡಳಿತ ಮಂಡಳಿ ಸದಸ್ಯರು, ಅರ್ಚಕ ವೃಂದ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…