ಬಂಟ್ವಾಳ: ಬಿಸಿರೋಡಿನ ಎಸ್.ಬಿ.ಐ.ಬ್ಯಾಂಕ್ ನಿಂದ ಹಣ ಡ್ರಾಮಾಡಿದ ಗ್ರಾಹಕ ಮಾಜಿ ಸೈನಿಕನೋರ್ವನ ನಗದು ಹಣದ ಬ್ಯಾಗನ್ನು ಕಳವು ಮಾಡಿದ ಆರೋಪಿಯನ್ನು ಬಂಟ್ವಾಳ ಪೋಲೀಸರ ತಂಡ ಬಂಧಿಸಿದೆ.
ಬೆಳ್ತಂಗಡಿ ನಿವಾಸಿ ಮಹಮ್ಮದ್ ಫಾರೂಕ್ (32) ಎಂಬಾತನನ್ನು ಬಂಟ್ವಾಳ ಸರಪಾಡಿಯ ಮಣಿನಾಲ್ಕೂರು ಎಂಬಲ್ಲಿ ಬಂಧಿಸಿದ್ದಾರೆ.
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ ಸಿ ರೋಡ್ ಎಸ್ ಬಿ ಐ ಬ್ಯಾಂಕಿನಲ್ಲಿ ಸೆ. 4 ರಂದು ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 147/2024 ಕಲಂ: 303(2) ಬಿ ಎನ್ ಎಸ್ – 2023 ರಂತೆ ಪ್ರಕರಣ ದಾಖಲಾಗಿತ್ತು. ಆರೋಪಿಯ ಪತ್ತೆಗಾಗಿ ರಚಿಸಲಾಗಿದ್ದ ಬಂಟ್ವಾಳ ಉಪ-ವಿಭಾಗದ ವಿಶೇಷ ತನಿಖಾ ತಂಡವು, ಆರೋಪಿಯನ್ನು ವಶಕ್ಕೆ ಪಡೆದು, ಆರೋಪಿಯಿಂದ 80,000 ರೂ ನಗದು ಹಣವನ್ನು ಸ್ವಾಧೀನಪಡಿಸಿರುತ್ತಾರೆ.
ಪ್ರಕರಣದ ಪತ್ತೆಗಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್ ಎನ್, ಐಪಿಎಸ್ ರವರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೇಂದ್ರರವರ ಮಾರ್ಗದರ್ಶನದಲ್ಲಿ, ಬಂಟ್ವಾಳ ಡಿವೈಎಸ್.ಪಿ ಎಸ್. ವಿಜಯಪ್ರಸಾದ್ ರವರ ನೇತೃತ್ವದ, ಗ್ರಾಮಾಂತರ ಎಸ್.ಐ. ಹರೀಶ್ ಎಂ.ಆರ್, ಪಿ.ಎಸ್. ಐ. ರವರ ವಿಶೇಷ ಪತ್ತೆ ತಂಡವನ್ನು ರಚಿಸಿದ್ದರು. ತನಿಖಾ ತಂಡದಲ್ಲಿ ಹೆಚ್ ಸಿ ಹರಿಶ್ಚಂದ್ರ , ಹೆಚ್ ಸಿ ರಾಧಾಕೃಷ್ಣ, ಪಿಸಿಗಳಾದ ಬಸವರಾಜ ಎಚ್ ,ಕೆ, ಕುಮಾರ್ ಎಚ್,ಕೆ, ಅಶೋಕ ಮತ್ತು ರಂಜಾನ್ ರವರುಗಳು ಪತ್ತೆ ಕಾರ್ಯದಲ್ಲಿ ಕಾರ್ಯನಿರ್ವಹಿಸಿರುತ್ತಾರೆ ಎಂದು ಎಸ್.ಪಿ.ಕಚೇರಿಯ ಸಾಮಾಜಿಕ ಜಾಲತಾಣದಲ್ಲಿ ನಮೂದಿಸಲಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…