ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ – ಮನೆಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪಾಳು ಬಾವಿಯಲ್ಲಿ ಪತ್ತೆ

 

ಉಳ್ಳಾಲ: ಮನೆಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪಾಳು ಬಿದ್ದ ಬಾವಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೊಲ್ಯ,ಕುಜುಮಗದ್ದೆ ನಿವಾಸಿ ಪ್ರಸಾದ್ (44) ಎಂದು ಗುರುತಿಸಲಾಗಿದೆ. ಮೂಲತ: ಜಪ್ಪು,ಗೋರ್ದಂಡು ನಿವಾಸಿಯಾದ ಪ್ರಸಾದ್ ಕಳೆದ ಕೆಲ ವರ್ಷಗಳಿಂದ ಕುಟುಂಬ ಸಮೇತ ಕುಜುಮಗದ್ದೆಯಲ್ಲಿ ನೆಲೆಸಿದ್ದರು.‌

ಪೈಂಟರ್ ವೃತ್ತಿ ನಡೆಸುತ್ತಿದ್ದ ಪ್ರಸಾದ್ ಅವರು ಅವಿವಾಹಿತರಾಗಿದ್ದು ಮನೆಯಲ್ಲಿ ಮೊಬೈಲ್ ಫೋನ್ ಬಿಟ್ಟು ಹೋದ ಪ್ರಸಾದ್ ಅವರು ಮತ್ತೆ ಸಂಪರ್ಕಕ್ಕೆ ಸಿಗದೆ ನಿನ್ನೆ ಮಧ್ಯಾಹ್ನ ನಾಪತ್ತೆಯಾಗಿದ್ದರು. ಈ ವೇಳೆ ಮನೆ ಮಂದಿ ನೆರೆಹೊರೆಯವರು ಹುಡುಕಾಡಿದಾಗ ಇಂದು ಬೆಳಿಗ್ಗೆ ಮನೆ ಹತ್ತಿರದ ಪಾಳು ಬಿದ್ದ ಬಾವಿಯ ಬಳಿ ಪ್ರಸಾದ್ ಅವರ ಪಾದರಕ್ಷೆ ದೊರೆತಿದ್ದು ಈ ಹಿನ್ನೆಲೆಯಲ್ಲಿ ಪಾಳು ಬಾವಿಯನ್ನು ಇಣುಕಿ ನೋಡಿದಾಗ ಪ್ರಸಾದ್ ಬಾವಿಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

 

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!