ಉಳ್ಳಾಲ: ಮನೆಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪಾಳು ಬಿದ್ದ ಬಾವಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೊಲ್ಯ,ಕುಜುಮಗದ್ದೆ ನಿವಾಸಿ ಪ್ರಸಾದ್ (44) ಎಂದು ಗುರುತಿಸಲಾಗಿದೆ. ಮೂಲತ: ಜಪ್ಪು,ಗೋರ್ದಂಡು ನಿವಾಸಿಯಾದ ಪ್ರಸಾದ್ ಕಳೆದ ಕೆಲ ವರ್ಷಗಳಿಂದ ಕುಟುಂಬ ಸಮೇತ ಕುಜುಮಗದ್ದೆಯಲ್ಲಿ ನೆಲೆಸಿದ್ದರು.
ಪೈಂಟರ್ ವೃತ್ತಿ ನಡೆಸುತ್ತಿದ್ದ ಪ್ರಸಾದ್ ಅವರು ಅವಿವಾಹಿತರಾಗಿದ್ದು ಮನೆಯಲ್ಲಿ ಮೊಬೈಲ್ ಫೋನ್ ಬಿಟ್ಟು ಹೋದ ಪ್ರಸಾದ್ ಅವರು ಮತ್ತೆ ಸಂಪರ್ಕಕ್ಕೆ ಸಿಗದೆ ನಿನ್ನೆ ಮಧ್ಯಾಹ್ನ ನಾಪತ್ತೆಯಾಗಿದ್ದರು. ಈ ವೇಳೆ ಮನೆ ಮಂದಿ ನೆರೆಹೊರೆಯವರು ಹುಡುಕಾಡಿದಾಗ ಇಂದು ಬೆಳಿಗ್ಗೆ ಮನೆ ಹತ್ತಿರದ ಪಾಳು ಬಿದ್ದ ಬಾವಿಯ ಬಳಿ ಪ್ರಸಾದ್ ಅವರ ಪಾದರಕ್ಷೆ ದೊರೆತಿದ್ದು ಈ ಹಿನ್ನೆಲೆಯಲ್ಲಿ ಪಾಳು ಬಾವಿಯನ್ನು ಇಣುಕಿ ನೋಡಿದಾಗ ಪ್ರಸಾದ್ ಬಾವಿಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…