ಮಂಗಳೂರು ಉದ್ಯಮಿ ಮುಮ್ತಾಜ್ ಅಲಿ ನಾಪತ್ತೆ: ಕೂಳೂರು ಸೇತುವೆ ಬಳಿ ಕಾರು ಪತ್ತೆ, ಶೋಧ ಕಾರ್ಯಾಚರಣೆ ಮುಂದುವರಿಕೆ
ಮಂಗಳೂರಿನ ಕುಳೂರಿನ ಸೇತುವೆ ಮೇಲೆ ಮುಮ್ತಾಜ್ ಕಾರು ಪತ್ತೆಯಾಗಿದ್ದು, ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂದರ್ಭ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮುಮ್ತಾಜ್ ಅವರು ಮುಂಜಾನೆ ಮೂರು ಗಂಟೆಗೆ ಮನೆಯಿಂದ ಬಿಎಂಡಬ್ಲ್ಯೂ ಕಾರ್ ಚಲಾಯಿಸಿಕೊಂಡು ಬಂದಿದ್ದು ಕುಳೂರು ಸೇತುವೆ ಬಳಿ ಕಾರು ಅಫಘಾತವಾಗಿ ಕಾಣೆಯಾಗಿದ್ದಾರೆ. ಈ ವಿಚಾರ ಮಗಳಿಗೆ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಮುಮ್ತಾಜ್ ಸೇತುವೆಯಿಂದ ಕೆಳಗೆ ಹಾರಿರುವ ಬಗ್ಗೆ ಸಂಶಯ ಇದೆ. ಹೀಗಾಗಿ ವಿವಿಧ ತಂಡಗಳು ನದಿಯಲ್ಲಿ ಶೋಧ ಕಾರ್ಯ ಮಾಡುತ್ತಿದ್ದಾರೆ. ಎಫ್ ಎಸ್ ಎಲ್ ಅಧಿಕಾರಿಗಳು ಕಾರು ಪರಿಶೀಲನೆ ಮಾಡಿದ್ದಾರೆ. ಕುಟುಂಬದ ಸದಸ್ಯರಿಂದಲೂ ಕೆಲವೊಂದು ಮಾಹಿತಿಗಳನ್ನು ಸಂಗ್ರಹಿಸಿದ್ದೇವೆ. ಘಟನೆಯ ಬಗ್ಗೆ ತನಿಖೆಯನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.



