ಮಂಗಳೂರು: ಇಂದು ಮುಂಜಾನೆಯಿಂದ ನಾಪತ್ತೆಯಾಗಿರುವ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರ ಸೋದರ; ಉದ್ಯಮಿ ಮುಮ್ತಾಜ್ ಆಲಿಯವರಿಗಾಗಿ ಹುಡುಕಾಟ ಮುಂದುವರೆದಿದೆ. ಕೂಳೂರು ಸೇತುವೆಯ ಮೇಲೆ ಕಾರು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೂಳೂರು ಸೇತುವೆ ಬಳಿ ನದಿಯಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ.
ಮಾಜಿ ಶಾಸಕ ಮೊಯ್ದಿನ್ ಬಾವಾ ಕೂಡ ಸ್ಥಳದಲ್ಲಿದ್ದು ಮುಳುಗುತಜ್ಞ ಈಶ್ವರ್ ಮಲ್ಪೆ ತಂಡ ಸಹಿತ ಹಲವು ರಕ್ಷಣಾ ತಂಡಗಳು ಶೋಧ ಕಾರ್ಯದಲ್ಲಿ ನಿರತವಾಗಿವೆ. ಒಂದು ಹಂತದ ಹುಡುಕಾಟದ ನಡೆಸಿದ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ನಾವು ಏಳು ಜನ ನದಿಯ ಆಳದಲ್ಲಿ ಮುಳುಗಿ ಕಾರ್ಯಾಚರಣೆ ನಡೆಸಿದ್ದೇವೆ, ಆದರೆ ಎಲ್ಲೂ ಕೂಡ ಅಲಿಯವರು ಪತ್ತೆಯಾಗಿಲ್ಲ ಎಂದರು.
ಸದ್ಯಕ್ಕೆ 100 ಮೀಟರ್ ಸುತ್ತುತ್ತಾ ಹುಡುಕಾಟ ನಡೆಸಲಾಗಿದೆ. ಸೇತುವೆ ಆಳಕ್ಕೆ ಇಳಿದು ಹುಡುಕಾಟ ನಡೆಸಿದ್ದೇವೆ. ಸೇತುವೆ ಕಾಮಗಾರಿ ನಡೆಯುತ್ತಿದ್ದು ಕೆಳಗೆ ಕಬ್ಬಿಣದ ಸರಳು, ಸಿಮೆಂಟ್ ಚೀಲಗಳಿವೆ. ನದಿಯ ಕೆಳಭಾಗದಲ್ಲಿ ಕತ್ತಲೆ ಇರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ಹೇಳಿದರು.
ಇಲ್ಲಿ ಬಿದ್ದಿದ್ದರೆ ಇಲ್ಲೇ ಸಿಗಬೇಕು, ಇಷ್ಟು ಬೇಗ ಸಮುದ್ರ ಸೇರುವುದಿಲ್ಲ. ಎಲ್ಲಾ ತಂಡಗಳು ಕಾರ್ಯಾಚರಣೆಯನ್ನು ಮತ್ತೆ ಮುಂದುವರೆಸಿದ್ದೇವೆ. ಅವರು ಜೀವಂತವಾಗಿ ಇರಲಿ ಎಂದು ಆಶೀಸುತ್ತೇವೆ ಎಂದರು. ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಅಲಿ ಅವರ ಸಹೋದರ ಬಿ.ಎಂ ಫಾರೂಕ್, ಐವನ್ ಡಿಸೋಜ ಭೇಟಿ ನೀಡಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…