ಜನ ಮನದ ನಾಡಿ ಮಿಡಿತ

Advertisement

ಗಂಗೊಳ್ಳಿ ಖಾರ್ವಿಕೇರಿ ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ; ದೇವಸ್ಥಾನದ ಅರ್ಚಕ ಬಂಧನ; 20 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಉಡುಪಿ: ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿ ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ. ದೇವಸ್ಥಾನದ ಅರ್ಚಕ ನರಸಿಂಹ ಭಟ್ (43) ಬಂಧಿತ ಆರೋಪಿ. ಈತ ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ದೇವಿಯ ಮೈಮೇಲಿದ್ದ ಅಸಲಿ ಚಿನ್ನಾಭರಣಗಳನ್ನು ಕಳ್ಳತನ ಮಾಡಿ, ನಕಲಿ ಚಿನ್ನಾಭರಣಗಳನ್ನು ದೇವಸ್ಥಾನದಲ್ಲಿ ಇರಿಸಿದ್ದ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದು, ಆರೋಪಿಯು ದೇವಸ್ಥಾನದ ಚಿನ್ನಾಭರಣಗಳನ್ನು ವಿವಿಧ ಬ್ಯಾಂಕ್ ಹಾಗೂ ಸೊಸೈಟಿಗಳಲ್ಲಿ ಅಡಮಾನವಿರಿಸಿರುವುದಾಗಿ ತಿಳಿಸಿದ್ದಾನೆ.

ಆರೋಪಿಯಿಂದ 40 ಗ್ರಾಂ ತೂಕದ ಚಿನ್ನದ ಜೋಬಿನ ಸರ ,73 ಗ್ರಾಂ ತೂಕದ ಚಿನ್ನದ ಕಾಸಿ ತಾಳಿ ಸರ , 73 ಗ್ರಾಂ ತೂಕದ ಚಿನ್ನದ ಕರಿಮಣಿ ಸರ, 6 ಗ್ರಾಂ ತೂಕದ 3 ಚಿನ್ನದ ತಾಳಿ, 64 ಗ್ರಾಂ ತೂಕದ ಚಿನ್ನದ ನಕ್ಲೇಸ್ ಸರ ಹೀಗೆ ಒಟ್ಟು 20,48,000 ರೂ. ಮೌಲ್ಯದ 256 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಯನ್ನು ಸದ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

ಕೊಚ್ಚಿ: ವಿಜೃಂಭಣೆಯ ಕೇರಳ-ಕರ್ನಾಟಕ ಜಾನಪದ ಉತ್ಸವ…!

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

error: Content is protected !!